ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ(ಸೆ.9) ಮತ್ತೆ ಮುಂದೂಡಿದೆ.
ಮುಂದಿನ ವಿಚಾರಣೆಯನ್ನು ಸೆಪ್ಟಂಬರ್ 12ರಂದು ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ.
ನ್ಯಾಯಾಧೀಶ ಎಂ.ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಇಂದು ಸಹ ಧೀರ್ಘ ವಿಚಾರಣೆ ನಡೆಯಿತು.
ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ, ಪ್ರಾಸಿಕ್ಯೂಷನ್‌ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ಹೇಳಿ ಲಲಿತಾ ಕುಮಾರಿ ಪ್ರಕರಣವನ್ನು ಉಲ್ಲೇಖಿಸಿದರು.
ಬಳಿಕ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ತಾವು ಸೆಪ್ಟಂಬರ್ 12ರಂದು ವಾದಿಸುವುದಾಗಿ ಕೋರ್ಟ್‌ಗೆ ಮನವಿ ಮಾಡಿದರು. ಹೀಗಾಗಿ ಕೋರ್ಟ್, ಏನೇ ಇದ್ದರೂ ಅಂದೇ ವಾದ ಮಂಡಿಸಿ ಕೊನೆಗೊಳಿಸಬೇಕು ಎಂದು ವಿಚಾರಣೆಯನ್ನು ಸೆಪ್ಟಂಬರ್ 12ಕ್ಕೆ ಮುಂದೂಡಿದೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…