Mysore
30
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಮುಡಾ ಕೇಸ್:‌ ʻಹೈʼ ವಿಭಾಗೀಯ ಪೀಠಕ್ಕೆ ಸಿಎಂ ಅರ್ಜಿ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ರಾಜ್ಯಪಾಲರ ಆದೇಶ ಎತ್ತಿ ಹಿಡಿದು ತನಿಖೆಗೆ ಆದೇಶ ನೀಡಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ.

ಈ ಹಿಂದೆ ರಾಜ್ಯಪಾಲರ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಏಕಸದಸ್ಯ ಪೀಠ, ರಾಜ್ಯಪಾಲರ ಆದೇಶ ಎತ್ತಿಹಿಡಿದು. ತನಿಖೆ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿ ಸರಿಯಿದೆ ಎಂದು ಸಿಎಂ ಅರ್ಜಿ ವಜಾಗೊಳಿಸಿ ಆದೇಶಿಸಿತ್ತು.

ಹೀಗಾಗಿ, ಇದೀಗ ಸಿದ್ದರಾಮಯ್ಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಅರ್ಜಿ ವಿಚಾರಣೆಗೆ ಬರಬೇಕಿದೆ.

 

Tags:
error: Content is protected !!