ರಾಜ್ಯ

ಮುಡಾ ಪ್ರಕರಣ : 6 ಸಂಪುಟಗಳ ದೇಸಾಯಿ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ಸರಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಲಾಗಿತ್ತು. ‌ಆದರೆ, ಒಂದು ವರ್ಷದ ನಂತರ ವರದಿಯನ್ನು ಹಸ್ತಾಂತರ ಮಾಡಿತು.

ಗುರುವಾರ ವಿಧಾನಸೌಧದ‌ ಮುಖ್ಯಕಾರ್ಯದರ್ಶಿಗಳ ಕೊಠಡಿಯಲ್ಲಿ ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವರದಿ ಸ್ವೀಕರಿಸಿದರು. ನ್ಯಾ.ಪಿ.ಎನ್.ದೇಸಾಯಿ‌ ಏಕಸದಸ್ಯ ಆಯೋಗ ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದೆ. ಮುಂದಿನ ಸಚಿವ ಸಂಪುಟದಲ್ಲಿ ವರದಿ ಮಂಡಿಸುವ ಸಾಧ್ಯತೆ ಇದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1) ರನ್ವಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿತ್ತು.

ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು, ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸುವಂತೆ ಸೂಚನೆ ನೀಡಲಾಗಿತ್ತು.

ಕೆಲ ರಾಜಕಾರಣಿಗಳು, ಅಧಿಕಾರಿಗಳು, ಬಿಲ್ಡರ್ ಗಳಿಗೆ ಸಂಕಷ್ಟವೋ? ರಿಲೀಫ್ ಸಿಗುತ್ತೋ ಎಂಬ ಕುತೂಹಲವಿದೆ. ಅಂದಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಬದಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಬಂದ ಕಾರಣದಿಂದ ವಿಚಾರಣಾ ಆಯೋಗ ರಚಿಸಲಾಗಿತ್ತು.

2024 ಜುಲೈನಲ್ಲಿ ನ್ಯಾ.ಪಿ.ಎನ್.ದೇಸಾಯಿ ಏಕಸದಸ್ಯ ಆಯೋಗ ರಚಿಸಿದ್ದ ಸರ್ಕಾರ, 2006ರಿಂದ 2024ರ ಜುಲೈ 15ರವರೆಗೂ ನಡೆದಿರುವ ಭೂಸ್ವಾಧೀನ, ಬಡಾವಣೆಗಳ ನಿರ್ಮಾಣ, ನಿವೇಶನ ಹಂಚಿಕೆ, ಪರಿಹಾರ ವಿತರಣೆ ಮತ್ತು ಬದಲಿ ನಿವೇಶನಗಳ ಹಂಚಿಕೆ ಕುರಿತ ಆರೋಪಗಳ ಕುರಿತು ವಿಚಾರಣೆಗೆ ಸೂಚಿಸಿತ್ತು.

ಹೆಚ್‌.ಡಿ. ಕುಮಾರಸ್ವಾಮಿ, ಬಿ.ಎಸ್‌. ಯಡಿಯೂರಪ್ಪ (ಎರಡು ಅವಧಿ), ಡಿ.ವಿ. ಸದಾನಂದ ಗೌಡ, ಜಗದೀಶ ಶೆಟ್ಟರ್‌, ಸಿದ್ದರಾಮಯ್ಯ (ಎರಡು ಅವಧಿ) ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಪ್ರಾಧಿಕಾರದಲ್ಲಿ ನಡೆದಿರಬಹುದಾದ ಅವ್ಯವಹಾರಗಳ ಕುರಿತು ವಿಚಾರಣೆ ನಡೆಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿತ್ತು. ವರ್ಷದ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಸಿರುವ ನ್ಯಾ.ದೇಸಾಯಿ ನೇತೃತ್ವದ ಆಯೋಗ ಹಲವು ಶಿಫಾರಸ್ಸುಗಳ ಮಾಡಿದೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

3 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

3 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

3 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

3 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

15 hours ago