Mysore
25
clear sky

Social Media

ಬುಧವಾರ, 17 ಡಿಸೆಂಬರ್ 2025
Light
Dark

ಮುಡಾ ಪ್ರಕರಣ : ಮಾಜಿ ಆಯುಕ್ತರಿಗೆ ನೀಡಿದ್ದ ಸಮನ್ಸ್‌ ಪ್ರಶ್ನಿಸಿ ಇ.ಡಿ ಮೇಲ್ಮನವಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದ ಆರೋಪದಲ್ಲಿ ಮಾಜಿ ಮುಡಾ ಆಯುಕ್ತ ಡಿ.ಬಿ ನಟೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಇ.ಡಿ(ಜಾರಿ ನಿರ್ದೇಶನಾಲಯ)ಯು ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ.

ಸೋಮವಾರ ಮನವಿಯನ್ನು ವಿಚಾರಣೆ ಮಾಡಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಅವರಿದ್ದ ನೇತೃತ್ವದ ಪೀಠ, ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಲಾಗಿದ್ದು, ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಏಪ್ರಿಲ್‌ 8ಕ್ಕೆ ಮುಂದೂಡಿದೆ.

ಇ.ಡಿ ನನ್ನ ಮನೆಯಲ್ಲಿ ನಡೆಸಿರುವ ಶೋಧ ಕಾರ್ಯ ಹಾಗೂ ದಾಖಲು ಮಾಡಿಕೊಂಡಿರುವ ನನ್ನ ಹೇಳಿಕೆ ಕಾನೂನು ಬಾಹಿರ ಎಂದು ಆಕ್ಷೇಪಿಸಿ ನಟೇಶ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದನ್ನು ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿತ್ತು.

Tags:
error: Content is protected !!