ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದ ಆರೋಪದಲ್ಲಿ ಮಾಜಿ ಮುಡಾ ಆಯುಕ್ತ ಡಿ.ಬಿ ನಟೇಶ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಇ.ಡಿ(ಜಾರಿ ನಿರ್ದೇಶನಾಲಯ)ಯು ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ.
ಸೋಮವಾರ ಮನವಿಯನ್ನು ವಿಚಾರಣೆ ಮಾಡಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಅವರಿದ್ದ ನೇತೃತ್ವದ ಪೀಠ, ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಲಾಗಿದ್ದು, ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಮುಂದೂಡಿದೆ.
ಇ.ಡಿ ನನ್ನ ಮನೆಯಲ್ಲಿ ನಡೆಸಿರುವ ಶೋಧ ಕಾರ್ಯ ಹಾಗೂ ದಾಖಲು ಮಾಡಿಕೊಂಡಿರುವ ನನ್ನ ಹೇಳಿಕೆ ಕಾನೂನು ಬಾಹಿರ ಎಂದು ಆಕ್ಷೇಪಿಸಿ ನಟೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿತ್ತು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…