ಮೈಸೂರು: ಮೈಸೂರು ನಗಾರಾಭಿವೃದ್ದಿ ಪ್ರಾಧಿಕಾರದ(ಮುಡಾ) ಪ್ರಕರಣದ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಇ.ಡಿ.ಅಧಿಕಾರಿಗಳು ತಯಾರಿ ನಡೆಸಿದ್ದಾರೆ.
ಮುಡಾ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ ದೂರಿನಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಇ.ಡಿ.ತನಿಖಾ ಸಂಸ್ಥೆಯೂ ವಿಚಾರಣೆಗೆ ಒಳಪಡಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕೆಲವೇ ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆಯಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಈಗಾಗಲೇ ಇ.ಡಿ.ಅಧಿಕಾರಿಗಳು ಮುಡಾ ಪ್ರಕರಣ ಸಂಬಂಧ ಮುಡಾ ಕಚೇರಿಯ ಮೇಲೆ ಎರಡೂ ದಿನಗಳ ಕಾಲ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸಿದ್ದರು. ಆ ನಂತರ ಮುಡಾ ಮಾಜಿ ಆಯುಕ್ತರಾದ ಟಿ.ಬಿ.ನಟೇಶ್ ಕುಮಾರ್ ಹಾಗೂ ದಿನೇಶ್ ಕುಮಾರ್ ಅವರ ಮನೆ ಮೇಲೂ ದಾಳಿ ಮಾಡಿದ್ದರು. ಅಲ್ಲದೇ ಎ4 ಆರೋಪಿ ದೇವರಾಜು, ಸಿಎಂ ಸಿದ್ದರಾಮಯ್ಯ ಆಪ್ತರಾದ ಬಿ.ಕೆ.ಕುಮಾರ್ ಹಾಗೂ ಬಾಮೈದ ಎ3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಅವರನ್ನು ಸಹ ವಿಚಾರಣೆಗೊಳಪಡಿಸಿದ್ದರು. ಆದರೆ ಇದೀಗ ಇ.ಡಿ.ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ತಯಾರಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…