Mysore
25
broken clouds

Social Media

ಗುರುವಾರ, 23 ಏಪ್ರಿಲ 2026
Light
Dark

ಮುಡಾ ಪ್ರಕರಣ: ಇಡಿಯ ತಕರಾರು ಅರ್ಜಿ ಏ.5ಕ್ಕೆ ಮುಂದೂಡಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏ.5 ಕ್ಕೆ ಮುಂದೂಡಿದೆ.

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿರುವ ಬಿ ರಿಪೋರ್ಟ್‌ ಸಂಶಯ ಬರುವಂತಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿತ್ತು.

ಇಡಿಯ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಗಜಾನನ ಭಟ್‌ ಇಡಿ ಪರ ವಕೀಲರ ವಾದ ಆಲಿಸಿದರು. ನಂತರ ಲೋಕಾಯುಕ್ತ ಪರ ಎಸ್‌ಪಿಪಿ ವಾದ ಮಂಡನೆ ಆಲಿಸಬೇಕಾಗಿರುವ ಕಾರಣ ನ್ಯಾಯಾಧೀಶರು ವಿಚಾರಣೆಯನ್ನು ಏಪ್ರಿಲ್‌ 5ಕ್ಕೆ ಮುಂದೂಡಿದರು.

 

Tags:
error: Content is protected !!