ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏ.5 ಕ್ಕೆ ಮುಂದೂಡಿದೆ.
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿರುವ ಬಿ ರಿಪೋರ್ಟ್ ಸಂಶಯ ಬರುವಂತಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿತ್ತು.
ಇಡಿಯ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಗಜಾನನ ಭಟ್ ಇಡಿ ಪರ ವಕೀಲರ ವಾದ ಆಲಿಸಿದರು. ನಂತರ ಲೋಕಾಯುಕ್ತ ಪರ ಎಸ್‌ಪಿಪಿ ವಾದ ಮಂಡನೆ ಆಲಿಸಬೇಕಾಗಿರುವ ಕಾರಣ ನ್ಯಾಯಾಧೀಶರು ವಿಚಾರಣೆಯನ್ನು ಏಪ್ರಿಲ್ 5ಕ್ಕೆ ಮುಂದೂಡಿದರು.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…