Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮುಡಾ ಪ್ರಕರಣ: ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದ ʼಎಚ್‌ಡಿಕೆʼ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ನಡೆಸಬೇಕು. ಜೊತೆಗೆ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್‌ ಅವರ ವಂಚನೆಗಳ ಬಗ್ಗೆ ಸ್ವತಂತ್ರ ಇಲಾಖೆಯಿಂದ ತನಿಖೆ ನಡೆಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಮುಡಾ ಪ್ರಕರಣಕ್ಕೆ  ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ವಿರುದ್ಧ ಮೈಸೂರು ಲೋಕಾಯುಕ್ತ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಆದರೆ ಇದೀಗ ಎಡಿಜಿಪಿ ಅವರು ಬರೆದ ನಿಂದನಾ ಪತ್ರದ ನೋಡುತ್ತಿದ್ದರೆ, ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಾಮಾಣಿಕ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ನಡೆಸುತ್ತಾರೆ ಎಂಬ ಯಾವ ನಂಬಿಕೆಯೂ ಇಲ್ಲ. ಅಲ್ಲದೇ ಲೋಕಾಯುಕ್ತ ಅಧಿಕಾರಿಗಳು ಕಾಂಗ್ರೆಸ್‌ಗೆ ಇಷ್ಟೊಂದು ನಿಷ್ಠೆಯನ್ನು ವ್ಯಕ್ತಪಡಿಸಿದಾಗ ಈ ಸಂಸ್ಥೆಯಿಂದ ನ್ಯಾಯಯುತ ತನಿಖೆ ನಡೆಯಬಹುದು ಎಂಬುದನ್ನು ಯಾರಾದರೂ ನಿರೀಕ್ಷಸಬಹುದೇ? ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐ ತನಿಖಾ ಸಂಸ್ಥೆಗೆ ಒಪ್ಪಿಸಬೇಕು ಎಂದು ಕುಮಾರಸ್ವಾಮಿ ಪತ್ರದಲ್ಲಿ ಅಮಿತ್‌ ಶಾ ಅವರಲ್ಲಿ ಮನವಿ ಮಾಡಿದ್ದಾರೆ.

ನಂತರ, ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್‌ ಅವರು ಸೇವಾ ನಿಯಮ ಉಲ್ಲಂಘಿಸಿದ್ದಾರೆಯೇ ಎಂದು ಪರಿಶೀಲಿಸಬೇಕು. ಚಂದ್ರಶೇಖರ್‌ ವಂಚನೆಗಳ ಬಗ್ಗೆ ಸ್ವತಂತ್ರ ಇಲಾಖೆಯಿಂದ ತನಿಖೆ ನಡೆಸಬೇಕು. ರಾಜ್ಯ ಕೇಡರ್‌ ಅಧಿಕಾರಿ ಅಲ್ಲದಿದ್ದರೂ ಇಲ್ಲಿ ಇರಲು ನಿಯಮ ಉಲ್ಲಂಘಿಸಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

Tags: