ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ನಡೆಸಬೇಕು. ಜೊತೆಗೆ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ಅವರ ವಂಚನೆಗಳ ಬಗ್ಗೆ ಸ್ವತಂತ್ರ ಇಲಾಖೆಯಿಂದ ತನಿಖೆ ನಡೆಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ವಿರುದ್ಧ ಮೈಸೂರು ಲೋಕಾಯುಕ್ತ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಆದರೆ ಇದೀಗ ಎಡಿಜಿಪಿ ಅವರು ಬರೆದ ನಿಂದನಾ ಪತ್ರದ ನೋಡುತ್ತಿದ್ದರೆ, ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಾಮಾಣಿಕ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ನಡೆಸುತ್ತಾರೆ ಎಂಬ ಯಾವ ನಂಬಿಕೆಯೂ ಇಲ್ಲ. ಅಲ್ಲದೇ ಲೋಕಾಯುಕ್ತ ಅಧಿಕಾರಿಗಳು ಕಾಂಗ್ರೆಸ್‌ಗೆ ಇಷ್ಟೊಂದು ನಿಷ್ಠೆಯನ್ನು ವ್ಯಕ್ತಪಡಿಸಿದಾಗ ಈ ಸಂಸ್ಥೆಯಿಂದ ನ್ಯಾಯಯುತ ತನಿಖೆ ನಡೆಯಬಹುದು ಎಂಬುದನ್ನು ಯಾರಾದರೂ ನಿರೀಕ್ಷಸಬಹುದೇ? ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐ ತನಿಖಾ ಸಂಸ್ಥೆಗೆ ಒಪ್ಪಿಸಬೇಕು ಎಂದು ಕುಮಾರಸ್ವಾಮಿ ಪತ್ರದಲ್ಲಿ ಅಮಿತ್ ಶಾ ಅವರಲ್ಲಿ ಮನವಿ ಮಾಡಿದ್ದಾರೆ.
ನಂತರ, ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಅವರು ಸೇವಾ ನಿಯಮ ಉಲ್ಲಂಘಿಸಿದ್ದಾರೆಯೇ ಎಂದು ಪರಿಶೀಲಿಸಬೇಕು. ಚಂದ್ರಶೇಖರ್ ವಂಚನೆಗಳ ಬಗ್ಗೆ ಸ್ವತಂತ್ರ ಇಲಾಖೆಯಿಂದ ತನಿಖೆ ನಡೆಸಬೇಕು. ರಾಜ್ಯ ಕೇಡರ್ ಅಧಿಕಾರಿ ಅಲ್ಲದಿದ್ದರೂ ಇಲ್ಲಿ ಇರಲು ನಿಯಮ ಉಲ್ಲಂಘಿಸಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…