ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ಅರ್ಜಿ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿಕೆ ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಲೋಕಾಯುಕ್ತ ಎಸ್‌ಪಿಪಿ ವೆಂಕಟೇಶ್ ಅಂತಿಮ ವರದಿ ಸಲ್ಲಿಸುವುದಕ್ಕಾಗಿ ಎರಡರಿಂದ ಮೂರು ದಿನಗಳ ಕಾಲಾವಕಾಶಕ್ಕೆ ಮನವಿ ಮಾಡಿದರು.
ಈ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅಂತಿಮ ವರದಿ ಸಲ್ಲಿಸಲು ಕಾಲಾವಕಾಶ ನೀಡಿ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ಮುಂದೂಡಿಕೆ ಮಾಡಿದ್ದಾರೆ.





