Mysore
26
broken clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ.

ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್‌ ಮನು ಸಿಂಘ್ವಿ, ಪ್ರೊ.ರವಿವರ್ಮ ಕುಮಾರ್‌, ಸರ್ಕಾರದ ಪರ ಎ.ಜೆ ಶಶಿಕಿರಣ್‌ ಶೆಟ್ಟಿ ವಾದ ಮಂಡಿಸಿದರು.

ದೂರುದಾರ ಟಿ.ಜೆ ಅಬ್ರಹಾಂ ಪರ ವಕೀಲ ರಂಗನಾಥ್‌ ರೆಡ್ಡಿ ಪ್ರತಿವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿ, ತೀರ್ಪು ಕಾಯ್ದಿರಿಸಿದೆ.

Tags:
error: Content is protected !!