ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಆದೇಶ ಹೊರಡಿಸಿದೆ.
ಈ ಆದೇಶ ಹೊರಬೀಳುತ್ತಿದ್ದಂತೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ನಿನ್ನೆ ಹೈಕೋರ್ಟ್ 17ಎ ಅನ್ವಯ ತನಿಖೆ ನಡೆಸುವಂತೆ ಆದೇಶಿಸಿತ್ತು. ಇಂದು ಜನಪ್ರತಿನಿಧಿಗಳ ಕೋರ್ಟ್ ಪಿಸಿ ಕಾಯ್ದೆ 7ಸಿ ಅಡಿ ತನಿಖೆ ನಡೆಸುವಂತೆ ಆದೇಶಿಸಿ ತೀರ್ಪು ನೀಡಿದೆ. ತೀರ್ಪಿನ ಅನ್ವಯ ಮೈಸೂರು ಲೋಕಾಯುಕ್ತಗೆ ತನಿಖೆ ನಡೆಸಲು ಹೇಳಿದೆ. ಹೀಗಾಗಿ ತನಿಖೆ ಎದುರಿಸಲು ನಾವು ತಯಾರಿದ್ದೇವೆ ಎಂದರು.
ಜನಪ್ರತಿನಿಧಿ ಕೋರ್ಟ್‌ನ ಆದೇಶವನ್ನು ನಾನು ಇನ್ನೂ ಓದಿಲ್ಲ. ಕೇರಳದಿಂದ ಬಂದಮೇಲೆ ಆದೇಶದಲ್ಲಿ ಏನಿದೆ ಎಂದು ನೋಡುತ್ತೇನೆ. ಕೋರ್ಟ್ ಆದೇಶದ ದೊರಕಿದ ನಂತರ ವಕೀಲರೊಂದಿಗೆ ಚರ್ಚಿಸಿ ಆ ನಂತರ ಸುಪ್ರೀಂಕೋರ್ಟ್‌ಗೆ ಮೇಲನ್ಮವಿ ಸಲ್ಲಿಸುತ್ತೇನೆ ಎಂದು ಹೇಳಿದರು.
ಹೈಕೋರ್ಟ್ ತೀರ್ಪು ಬಂದ ನಂತರ ನಿನ್ನೆಯೂ ಹೇಳಿದ್ದೆ, ಈಗಲೂ ಹೇಳುತ್ತೇನೆ ನಾನು ತನಿಖೆಗೆ ಹೆದರುವುದಿಲ್ಲ. ದೂರುದಾರರು ಮೈಸೂರಿನವರಾಗಿದ್ದಾರೆ. ಹೀಗಾಗಿ ಅಲ್ಲಿಯೇ ತನಿಖೆ ನಡೆಯುತ್ತದೆ. ಇಂದು ಕೋರ್ಟ್ ನೀಡುವ ಆದೇಶದ ಪ್ರತಿಯನ್ನು ಪಡೆದುಕೊಂಡ ನಂತರ ಮುಂದಿನ ನಿರ್ಧಾರದ ಬಗ್ಗೆ ನಾಳೆ(ಸೆ.26) ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ರಚಿಸಿರುವ ತನಿಖಾ ಆಯೋಗಕ್ಕೆ ಕೋರ್ಟ್ ಯಾವುದೇ ತಡೆ ನೀಡಿಲ್ಲದ ಕಾರಣ ಆ ತನಿಖೆ ಎಂದಿನಂತೆ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…