ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ವಿಮಾನ ಅಥವಾ ಹೆಲಿಕಾಪ್ಟರ್‌ನಲ್ಲಿ ನಾನೇನಾದರೂ ದಾಖಲೆ ಹೊತ್ತು ತಂದಿದ್ದರೆ ರಾಜೀನಾಮೆ ಕೊಡ್ತೇನೆ. ಇಲ್ಲ ಅಂದರೆ ಅವರು ಏನು ಮಾಡುತ್ತಾರೆ ಕೇಳಿ ಎಂದು ಸಚಿವ ಭೈರತಿ ಸುರೇಶ್ ಸವಾಲು ಹಾಕಿದ್ದಾರೆ.
ವಿಶೇಷ ವಿಮಾನ ಅಥವಾ ಹೆಲಿಕಾಪ್ಟರ್‌ನಲ್ಲಿ ದಾಖಲೆ ತಂದಿದ್ದಾರೆ ಎಂಬ ವಿಪಕ್ಷ ನಾಯಕರ ಆರೋಪಕ್ಕೆ ಸಚಿವ ಭೈರತಿ ಸುರೇಶ್ ಕಿಡಿ ಕಾರಿದ್ದು, ಯಾರಾದಾರೂ ದಾಖಲೆ ತರಲು ಆಗುತ್ತಾ ಎಂದು ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ 20 ವರ್ಷಗಳಿಂದ ತಪ್ಪುಗಳಾಗುತ್ತಾ ಬಂದಿದೆ. 2005 ರವರೆಗಿನ ಎಲ್ಲ ವಿಚಾರ ತನಿಖೆಗೆ ಕೊಡಲು ಸಿದ್ಧತೆ ನಡೆಸುತ್ತಿದ್ದೇನೆ. ಸುಖಾ ಸುಮ್ಮನೇ ಸಿಎಂ ರಾಜೀನಾಮೆ ಕೊಡಲು ಆಗುತ್ತಾ? ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಏನು ತನಿಖಾಧಿಕಾರಿನಾ ಎಂದು ಪ್ರಶ್ನಿಸಿದರು.
ಮುಡಾ ಪ್ರಕರಣವನ್ನು ಐಎಎಸ್ ಅಧಿಕಾರಿಗಳಿಗೆ ಕೊಡದೆ ಬಿಜೆಪಿಗರಿಗೆ ಕೊಡಬೇಕಾ? ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸರ್ಕಾರ ಯಾರನ್ನು ಬಿಡಲ್ಲ. ಸ್ವಲ್ಪ ದಿನ ಕಾಯಿರಿ ಎಲ್ಲಾ ಗೊತ್ತಾಗುತ್ತೆ ಎಂದು ಹೇಳಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…