ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಒಪ್ಪಿಗೆ ನೀಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಹ ಹೈ ತೀರ್ಪನ್ನು ಎತ್ತಿಹಿಡಿದಿತ್ತು. ಈ ಬೆಳವಣಿಗೆ ಬಳಿಕ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಕೂಗು ವಿಪಕ್ಷಗಳಿಂದ ಕೇಳಿಬಂದಿತ್ತು.
ಈ ಕುರಿತು ಮಾಧ್ಯಮದವರ ಜತೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ʼನಾನು ರಾಜೀನಾಮೆ ಕೊಡಲ್ಲʼ ಎಂದು ಪುನರುಚ್ಚರಿಸುವ ಮೂಲಕ ತಮ್ಮ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಈ ಹಿಂದೆ ಗುಜರಾತ್‌ನಲ್ಲಿ ಗೋಧ್ರಾ ಗಲಭೆ ಉಂಟಾದಾಗ ನರೇಂದ್ರ ಮೋದಿ ರಾಜೀನಾಮೆ ಕೊಟ್ಟಿದ್ರಾ, ಈಗ ಇದೇ ಎನ್‌ಡಿಎ ಜೊತೆಗಿರುವ ಕುಮಾರಸ್ವಾಮಿ ಅವರು ರಾಜೀನಾಮೆ ಕೊಟ್ಟಿದ್ದಾರಾ ಎಂದು ಟೀಕಿಸಿದ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ ಎಂದು ಹೇಳಿದರು.