Mysore
29
moderate rain

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಮುಡಾ ಪ್ರಕರಣ ಸಿವಿಲ್ ಮ್ಯಾಟ್ರೂ ಎಂದ ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಹೀಗಾಗಿ ಈ ವಿಚಾರ ಸಿವಿಲ್‌ ಮ್ಯಾಟ್ರೂ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಮುಡಾ ಕಚೇರಿಯ ಮೇಲೆ ಇ.ಡಿ ಅಧಿಕಾರಿಗಳು ರೇಡ್‌ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ವಿರೋಧ ಪಕ್ಷಗಳು ಆಗ್ರಹಿಸುತ್ತಿವೆ. ಈ ಮಧ್ಯೆ ನಿನ್ನೆ ಮತ್ತು ಇಂದು ಇ.ಡಿ ಅಧಿಕಾರಿಗಳು ನಿರಂತರಾಗಿ ದಾಳಿ ನಡೆಸುತ್ತಿದ್ದಾರೆ. ಅಲ್ಲದೇ, ಮುಡಾ ಹಗರಣ ಒಂದು ಸಿವಿಲ್‌ ಮ್ಯಾಟ್ರೂ ರೀ. ಇದನ್ನು ವಿಶ್ವ ನೋಡೋ ಹಾಗೆ ಮಾಡಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಮುಡಾ ಪ್ರಕರಣ ಸಿವಿಲ್‌ ವಿಷಯವಾಗಿದೆ. ಅದನ್ನು ವಿರೋಧ ಪಕ್ಷದ ನಾಯಕರೆಲ್ಲರೂ ಸೇರಿ ಸಾರ್ವಜನಿಕರಿಗೆ ತಪ್ಪು ಕಲ್ಪನೆ ಬರುವ ರೀತಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಯಾಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನೆ ಮಾಡಿದರು.

 

 

Tags: