ರಾಜ್ಯ

ಮುಡಾ ಪ್ರಕರಣ ರಾಜಕೀಯ ಪ್ರೇರಿತ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಮುಡಾ ಪ್ರಕರಣ ರಾಜಕೀಯ ಪ್ರೇರಿತ. ಆಸ್ತಿಗೆ ಪ್ರತಿಯಾಗಿ ಪರಿಹಾರ ಕೇಳಿದ್ದನ್ನು ಅಪರಾಧ ಎಂದು ಬಿಂಬಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಪ್ರಕರಣದಲ್ಲಿ ಬಿಜೆಪಿ ದೆಹಲಿಯಿಂದ ವಕೀಲರನ್ನು ಕರೆಸಿ ವಾದ ಮಂಡಿಸಿದ್ದು ನಮಗೆ ಗೊತ್ತಿದೆ. ಇದರ ಹಿಂದೆ ಯಾವ ರೀತಿಯ ರಾಜಕೀಯ ಇದೆ ಎಂದು ನಮಗೆಲ್ಲಾ ಅರ್ಥವಾಗಿದೆ ಎಂದರು.

ಲೋಕಾಯುಕ್ತ ತನಿಖೆ ಮುಖ್ಯಮಂತ್ರಿ ಅಥವಾ ಇನ್ಯಾರದೋ ಅಣತಿಯಂತೆ ನಡೆದಿಲ್ಲ. ನ್ಯಾಯಾಲಯದ ಉಸ್ತುವಾರಿಯಲ್ಲಿ ವಿಚಾರಣೆಯಾಗಿದೆ. ಮೇಲಾಗಿ ಲೋಕಾಯುಕ್ತ ಚುನಾವಣಾ ಆಯೋಗದಂತೆ ಸಂಪೂರ್ಣ ಸ್ವಾಯತ್ತ ಸಂಸ್ಥೆ. ಅಲ್ಲಿ ಮುಖ್ಯಮಂತ್ರಿಯವರ ಹಸ್ತಕ್ಷೇಪ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳ್ದೆ? ಇದು ರಾಜಕೀಯ ಪ್ರೇರಿತ ಆರೋಪ. ಯಾವ ದಾಖಲೆಯಲ್ಲೂ ಸಿದ್ದರಾಮಯ್ಯ ಅವರ ಸಹಿ ಇಲ್ಲದಿರುವಾಗ, ಸಂಬಂಧವೇ ಇಲ್ಲದಿರುವಾಗ ಅವರ ಪಾತ್ರ ಹೇಗೆ ಬರುತ್ತದೆ ಎಂದರು.

ಆಸ್ತಿ ಕಳೆದುಕೊಂಡವರು ಪರಿಹಾರ ಕೇಳುವುದು ಸಹಜ. ನಾವು ನೀವು ಕೂಡ ಕೇಳುತ್ತೇವೆ. ಅವರು ಕೊಟ್ಟಿದ್ದಾರೆ. ನಮಗೆ ಇಂತಹುದೇ ಜಾಗದಲ್ಲಿ ನಿವೇಶನ ನೀಡಿ ಎಂದು ಅವರು ಎಲ್ಲಿಯೂ ಕೇಳಿಲ್ಲ. ಆದರೂ ಅನಗತ್ಯ ಗೊಂದಲ ಬೇಡ ಎಂದು ಅವರು ಈ ನಿವೇಶನಗಳನ್ನು ವಾಪಸ್ ನೀಡಿದ್ದಾರೆ ಎಂದು ತಿಳಿಸಿದರು.

ಯಾವುದೇ ಪ್ರಕರಣ ದಾಖಲಿಸುವಾಗ ಅದಕ್ಕೆ ಪೂರಕವಾದ ದಾಖಲೆ ಬೇಕು. ಲೋಕಾಯುಕ್ತ ಸಂಸ್ಥೆ ತನ್ನ ಕರ್ತವ್ಯ ಮಾಡಿದೆ. ಬಿಜೆಪಿಯವರು ತಮ ಹೋರಾಟ ಮಾಡಿಕೊಳ್ಳಲಿ. ದೆಹಲಿಯಿಂದ ವಕೀಲರನ್ನು ಕರೆಸಿ ವಾದ ಮಂಡಿಸಲು ನಮಗೆ ಗೊತ್ತಿಲ್ಲವೇ? ಇದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕುತಂತ್ರ. ಇದು ಹೆಚ್ಚು ದಿನ ನಡೆಯುವುದಿಲ್ಲ ಎಂದರು.

ಲೋಕಾಯುಕ್ತ ಸಂಸ್ಥೆ ಸರ್ಕಾರದ ತಾಳಕ್ಕೆ ಕುಣಿದಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ಸುಪ್ರೀಂ ಕೋರ್ಟ್ ತೀರ್ಪು ಏನಿದೆ ಗೊತ್ತಿದೆಯೇ? ಸ್ಥಳೀಯ ಮಟ್ಟದ ಯಾವುದೇ ಸಂಸ್ಥೆಗಳನ್ನು ದುರ್ಬಲಗೊಳಿಸಬಾರದು ಎಂಬ ನಿರ್ದೇಶನವಿದೆ. ಇನ್ನು ಹೈಕೋರ್ಟ್ ಕೂಡ ಲೋಕಾಯುಕ್ತ ಸ್ವಾಯತ್ತ ಸಂಸ್ಥೆ ಎಂದು ಹೇಳಿದೆ. ಅವರವರು ಅವರ ಕೆಲಸ ಮಾಡುತ್ತಿದ್ದಾರೆ. ಯಾರೇ ಸಿಎಂ ಆಗಿರಲಿ, ಬೊಮಾಯಿ ಸಿಎಂ ಆಗಿರಲಿ, ಮುಖ್ಯಮಂತ್ರಿ ಹೇಳಿದಂತೆ ಲೋಕಾಯುಕ್ತ ಪೊಲೀಸರು ಕೇಳುತ್ತಾರಾ? ಎಂದು ಪ್ರಶ್ನಿಸಿದರು.

ಇದರಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪವಿಲ್ಲ. ಇಲ್ಲಿ ಯಾವುದೇ ಅಧಿಕಾರಿ ನೇಮಿಸಬೇಕಾದರೂ ಲೋಕಾಯುಕ್ತರ ಅನುಮತಿ ಮೇರೆಗೆ ಕೆಲಸ ಮಾಡಲಾಗುವುದು. ಇಲ್ಲಿ ಕರ್ನಾಟಕದ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುವುದೇ ಹೊರತು, ಹೊರ ರಾಜ್ಯದವರನ್ನು ಆಯ್ಕೆ ಮಾಡಲು ಬರುವುದಿಲ್ಲ ಎಂದು ತಿಳಿಸಿದರು.

ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅವರಿಗೆ ಬೇರೆ ಸಮಯದಲ್ಲಿ ಉತ್ತರ ನೀಡುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

19 mins ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

43 mins ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

2 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

2 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

2 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

3 hours ago