Mysore
20
clear sky

Social Media

ಶುಕ್ರವಾರ, 06 ಡಿಸೆಂಬರ್ 2024
Light
Dark

ಮುಡಾ ಪ್ರಕರಣ: ಹೈಕೋರ್ಟ್‌ಗೆ ಇಂದು ಲೋಕಾಯುಕ್ತ ಅಧಿಕಾರಿಗಳಿಂದ ವರದಿ ಸಲ್ಲಿಕೆ

ಬೆಂಗಳೂರು:  ಹೈಕೋರ್ಟ್‌ಗೆ ಮುಡಾ ಪ್ರಕರಣ ವಿಚಾರವಾಗಿ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಇಂದು ವರದಿ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನ.26ರೊಳಗೆ ವರದಿ ಸಲ್ಲಿಕೆ ಮಾಡಲು ಕಾಲಾವಕಾಶ ನೀಡಿತ್ತು. ಈ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್‌ ಇಂದು(ನ.25) ಬೆಂಗಳೂರಿಗೆ ತೆರಳಿ ವರದಿ ಸಲ್ಲಿಕೆ ಮಾಡಲಿದ್ದಾರೆ.

ಈ ವಿಚಾರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಿರುವ ಉದೇಶ್‌ ಅವರು ಸುಮಾರು 400ಕ್ಕೂ ಅಧಿಕ ಪುಟಗಳ ವರದಿ ಸಲ್ಲಿಕೆ ಮಾಡಲಿದ್ದಾರೆ.

ವರದಿಯಲ್ಲಿ ಎ1 ಆರೋಪಿ ಸಿಎಂ ಸಿದ್ದರಾಮಯ್ಯ, ಎ2 ಆರೋಪಿ ಪಾರ್ವತಿ ಸಿದ್ದರಾಮಯ್ಯ, ಎ3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಅವರ ಸಮಗ್ರ ವಿಚಾರಣೆಯಿದೆ. ಇದರ ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿಚಾರಣೆ, ಕೆಸರೆ ಗ್ರಾಮದ ಸರ್ವೆ ನಂ.464ರ 3.16 ಎಕರೆ ಜಮೀನು ಹಾಗೂ ಮುಡಾ ಪ್ರಕರಣದ ನಿವೇಶನಗಳು ಸೇರಿದಂತೆ ಹಿಂದಿನ ಆಯುಕ್ತರ ಹೇಳಿಕೆಗಳನ್ನು ವರದಿ ಮಾಡಲಾಗಿದೆ. ಅಲ್ಲದೇ ಅಧಿಕಾರಿಗಳು ಇಲ್ಲಿಯವರೆಗೂ ನಡೆಸಿರುವ ವಿಚಾರಣೆ ಕುರಿತು ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.

 

Tags: