ಬೆಂಗಳೂರು: ಹೈಕೋರ್ಟ್‌ಗೆ ಮುಡಾ ಪ್ರಕರಣ ವಿಚಾರವಾಗಿ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಇಂದು ವರದಿ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ.26ರೊಳಗೆ ವರದಿ ಸಲ್ಲಿಕೆ ಮಾಡಲು ಕಾಲಾವಕಾಶ ನೀಡಿತ್ತು. ಈ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಇಂದು(ನ.25) ಬೆಂಗಳೂರಿಗೆ ತೆರಳಿ ವರದಿ ಸಲ್ಲಿಕೆ ಮಾಡಲಿದ್ದಾರೆ.
ಈ ವಿಚಾರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಿರುವ ಉದೇಶ್ ಅವರು ಸುಮಾರು 400ಕ್ಕೂ ಅಧಿಕ ಪುಟಗಳ ವರದಿ ಸಲ್ಲಿಕೆ ಮಾಡಲಿದ್ದಾರೆ.
ವರದಿಯಲ್ಲಿ ಎ1 ಆರೋಪಿ ಸಿಎಂ ಸಿದ್ದರಾಮಯ್ಯ, ಎ2 ಆರೋಪಿ ಪಾರ್ವತಿ ಸಿದ್ದರಾಮಯ್ಯ, ಎ3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಅವರ ಸಮಗ್ರ ವಿಚಾರಣೆಯಿದೆ. ಇದರ ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿಚಾರಣೆ, ಕೆಸರೆ ಗ್ರಾಮದ ಸರ್ವೆ ನಂ.464ರ 3.16 ಎಕರೆ ಜಮೀನು ಹಾಗೂ ಮುಡಾ ಪ್ರಕರಣದ ನಿವೇಶನಗಳು ಸೇರಿದಂತೆ ಹಿಂದಿನ ಆಯುಕ್ತರ ಹೇಳಿಕೆಗಳನ್ನು ವರದಿ ಮಾಡಲಾಗಿದೆ. ಅಲ್ಲದೇ ಅಧಿಕಾರಿಗಳು ಇಲ್ಲಿಯವರೆಗೂ ನಡೆಸಿರುವ ವಿಚಾರಣೆ ಕುರಿತು ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…