ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟವಾಗಿರುವ 14 ನಿವೇಶನಗಳನ್ನು ವಾಪಾಸ್ ನೀಡಿದ್ದು ಸ್ವಲ್ವ ತಡವಾಗಿರಬಹುದು, ಆದರೆ ಈ ನಿರ್ಧಾರ ಸರಿ ಇರುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಇಂದು(ಅಕ್ಟೋಬರ್.1) ಸುದ್ದಿಗಾರರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾದ 14 ನಿವೇಶನಗಳನ್ನು ವಾಪಾಸ್ ಮಾಡಲು ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಕಾನೂನಾತ್ಮಕವಾಗಿ ಮುಂದೇನು ಆಗುತ್ತೆ ಎಂದು ಕಾದು ನೋಡಬೇಕಾಗಿದೆ. ಈ ಮಧ್ಯೆ ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಹಾಗೇ ಹುಡುಕುತ್ತಿದ್ದಾರೆ. ಸಿಎಂ ಪತ್ನಿ ನಿವೇಶನಗಳನ್ನು ವಾಪಾಸ್ ನೀಡಿದ್ದು ಸ್ವಲ್ವ ತಡವಾಗಿರಬಹುದು. ಆದರೆ ಒಮೊಮ್ಮೆ ತಡವಾಗಿರುವ ನಿರ್ಧಾರಗಳು ಸರಿಯಾಗಿರುತ್ತವೆ ಎಂದು ಹೇಳಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ನಮ್ಮ ಪಕ್ಷದ 136 ಜನ ಶಾಸಕರೂ ನಿಲ್ಲುತ್ತೇವೆ. ಅಲ್ಲದೇ ಕಾಂಗ್ರೆಸ್ ಹೈಕಮಾಂಡ್ ಸಹ ಅವರ ಪರ ನಿಲ್ಲುತ್ತದೆ. ಇದನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…
ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…
ಮೈಸೂರು : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಅಂದು…
ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್ ರಕ್ಷಣಾ…
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…