ಬೆಂಗಳೂರು: ಮುಡಾ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರನ್ನು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಇಂದು(ಅ.28) ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಶಾಂತಿನಗರದ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಚಾರಣೆಗೆ ಹಾಜರಾಗುವಂತೆ ಅಕ್ಟೋಬರ್ 22 ರಂದು ನನಗೆ ನೋಟಿಸ್ ನೀಡಲಾಗಿತ್ತು. ಆದರೆ, ಅಕ್ಟೋಬರ್ 23 ರಂದು ಸಂಜೆ 4 ಗಂಟೆಗೆ ನನಗೆ ನೋಟಿಸ್ ತಲುಪಿದ ಕಾರಣ ನಾನು ಕಾಲಾವಕಾಶ ಕೇಳಿದ್ದೆ. ಹೀಗಾಗಿ ಅಕ್ಟೋಬರ್ 24 ರಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ನಾನು ಇಂದು ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಹೇಳಿದರು.
ಮುಡಾ ಪ್ರಕರಣ: ಎ4 ಆರೋಪಿ ಸಹ ವಿಚಾರಣೆಗೆ ಹಾಜರು
ಮುಡಾ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ 4 ಜನರ ಮೇಲೆ ಎಫ್‌ಐಆರ್ ದಾಖಲಿಸಿದೆ. ಈ ಎಫ್‌ಐಆರ್‌ನಲ್ಲಿ ಎ4 ಆರೋಪಿಯಾಗಿರುವ ದೇವರಾಜರನ್ನು ಸಹ ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದು, ಇಂದು ಗಂಗರಾಜು ನಂತರ ದೇವರಾಜು ಮುಡಾ ಪ್ರಕರಣದ ಬಗ್ಗೆ ವಿಚಾರಣೆ ಎದುರಿಸಲಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…