ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಅಕ್ಟೋಬರ್ .18) ಸುದ್ದಿಗಾರರೊಂದಿಗೆ ಮಾತನಾಡಿ ಮುಡಾ ಕಚೇರಿ ಮೇಲೆ ಇ.ಡಿ ದಾಳಿ ಮಾಡಿರುವ ಬಗ್ಗೆ ಪತ್ರಿಕ್ರಿಯೆ ನೀಡಿದ ಅವರು, ಮುಡಾ ಪ್ರಕರಣದಲ್ಲಿ ಸಂಬಂಧಿಸಿದಂತೆ ಮುಡಾ ಕಚೇರಿಯಲ್ಲಿ ಇ.ಡಿ.ದಾಳಿ ಮಾಡಿದೆ. ಪ್ರಕರಣವನ್ನು ಈಗಾಗಲೇ ಮೈಸೂರು ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಆದರೆ, ರಾಜ್ಯದ ಅಧಿಕಾರಿಗಳಿಂದ ನ್ಯಾಯ ಸಮ್ಮತ ತನಿಖೆ ನಡೆಯುತ್ತದೆ ಎಂಬುದು ಅಸಾಧ್ಯ. ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ಜೊತೆಗೆ ಮುಡಾದಿಂದ ಕೆಲವು ದಿನಗಳ ಹಿಂದೆ ದಾಖಲೆಗಳನ್ನು ತೆಗೆದುಕೊಂಡಿರುವ ಸಚಿವ ಭೈರತಿ ಸುರೇಶ್ ಅವರು ಸಹ ರಾಜೀನಾಮೇ ನೀಡಬೇಕು ಎಂದು ಆಗ್ರಹಿಸಿದರು.