ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣದಲ್ಲಿ ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೆ ಸಂಪೂರ್ಣ ದಾಖಲೆ ಸಲ್ಲಿಸಿದ್ದಾರೆ.
ಸಲ್ಲಿಸಿರುವ ದಾಖಲೆಗಳ ಸಂಬಂಧ ಸ್ನೇಹಮಯಿ ಕೃಷ್ಣ ಅವರಿಂದ ಇ.ಡಿ ಸಂಪೂರ್ಣ ದಾಖಲೆ ಪಡೆದುಕೊಂಡಿದ್ದು, ಮುಂದಿನ ವಿಚಾರಣೆ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ.
ಮುಡಾ ಪ್ರಕರಣ ಸಂಬಂಧ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಸ್ನೇಹಮಯಿ ಕೃಷ್ಣ ಅವರಿಗೆ ಇ.ಡಿ ಸಮನ್ಸ್ ನೀಡಿತ್ತು. ಅದರಂತೆ ಕೃಷ್ಣ ಅವರು ನಿನ್ನೆ ಬೆಳಿಗ್ಗೆ ಇ-ಮೇಲ್ ಮೂಲಕ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದರು.
ಇದರೊಂದಿಗೆ ಬೆಂಗಳೂರಿನ ಇ.ಡಿ ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪ್ರತಿಗಳನ್ನು ಸಹ ನೀಡಿದ್ದಾರೆ.
ಸಂಪೂರ್ಣ ದಾಖಲೆಗಳನ್ನು ಪರಿಶೀಲನೆ ನಡೆಸಿದ ಇ.ಡಿ, ಸ್ನೇಹಮಯಿ ಕೃಷ್ಣರಿಂದ ಸಂಪೂರ್ಣ ವಿವರಣೆ ಪಡೆದುಕೊಂಡಿದೆ.
ಇನ್ನು ಮುಂದೆ ಅಸಲಿ ಆಟ ಶುರುವಾಗಲಿದೆ ಎನ್ನಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಕೆಲವೇ ದಿನಗಳಲ್ಲಿ ನೋಟಿಸ್ ನೀಡುವ ಸಾಧ್ಯತೆ ಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…