Mysore
21
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಮುಡಾ ಪ್ರಕರಣ: ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಏಕಸದಸ್ಯಾ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಲೋಕಾಯುಕ್ತ ಸಂಸ್ಥೆ ಪಕ್ಷಪಾತ ತನಿಖೆ ನಡೆಸುತ್ತಿದೆ ಆದ್ದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ಧ ಏಕಸದಸ್ಯ ಪೀಠ ಫೆಬ್ರುವರಿ 7 ರಂದು ವಜಾ ಮಾಡಿತ್ತು.

ಈಗ ಮತ್ತೆ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Tags:
error: Content is protected !!