ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ)ದ ನೋಟಿಸ್ ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರು 10 ದಿನಗಳ ಕಾಲ ಸಿಎಂ ಪತ್ನಿ ಮತ್ತು ಬೈರತಿ ಸುರೇಶ್ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಿ ಆದೇಶ ಪ್ರಕಟಿಸಿದರು.
ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ಗೆ ಹೈಕೋರ್ಟ್ ಮಧ್ಯಂತರ ರಕ್ಷಣೆ ಮುಂದುವರಿದಿದೆ. ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಅವರು ಇಡಿ ಸಮನ್ಸ್ ಪ್ರಶ್ನಿಸಿ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಫೆಬ್ರವರಿ 10ರ ವರೆಗೆ ಇಡಿ ನೀಡಿದ್ದ ಸಮನ್ಸ್‌ಗೆ ತಡೆ ನೀಡಿದ್ದರು. ಇದೀಗ ಮತ್ತೆ ಫೆಬ್ರವರಿ 20 ರವರೆಗೆ ತಡೆಯಾಜ್ಞೆಯನ್ನು ವಿಸ್ತರಿಸಲಾಗಿದೆ.
ಮೊದಲು ಸಚಿವ ಬೈರತಿ ಸುರೇಶ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿವಿ ನಾಗೇಶ್, ಬೈರತಿ ಸುರೇಶ್ 2023ರ ಜೂನ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ ಇಡಿ ಪ್ರಶ್ನಾವಳಿಯಲ್ಲಿ ಅಪ್ಪ, ತಾತ, ಮಕ್ಕಳು, ಮೊಮ್ಮಕ್ಕಳ ಮಾಹಿತಿ ಎಲ್ಲಾ ನೀಡಿ ಎಂದು ಸಮನ್ಸ್ ಮಾಡಿದೆ. ಎಲ್ಲರ ಮಾಹಿತಿಯನ್ನು ಬ್ಯಾಂಕ್ ಡಿಟೈಲ್ಸ್ ಕೊಡಬೇಕೆಂದು ಇಡಿ ಕೇಳುತ್ತಿದೆ. ಸುರೇಶ್ ಗೂ ಈ ಪ್ರಕರಣ ಯಾವುದೇ ಸಂಬಂಧ ಇಲ್ಲ. ಪ್ರಕರಣದಲ್ಲಿ ಅವರು ಆರೋಪಿಯೂ ಅಲ್ಲ, ಆದರೂ ಕೂಡ ಇಡಿ ಸಮನ್ಸ್ ನೀಡಿದೆ.. ಹೀಗಾಗಿ ಕೋರ್ಟ್ ಗೆ ಬಂದಿದ್ದೇವೆ ಎಂದು ವಾದ ಮಂಡಿಸಿದರು.
ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ಅವರು, ಇಡಿ ಸಮನ್ಸ್ ಜಾರಿಗೊಳಿಸಿದಾಗ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ಈ ಬಗ್ಗೆ ಸುಪ್ರೀಂಕೋರ್ಟ್ ನ ಇತ್ತೀಚಿನ ತೀರ್ಪು ಇದೆ ಎಂದರು.
ಪ್ರಕರಣದಲ್ಲಿ ಸೈಟ್‌ಗಳನ್ನು ವಾಪಸ್ ಮಾಡಲಾಗಿದೆ.ಅಕ್ರಮ ಹಣ ವಗಾರ್ವಣೆ ಪ್ರಶ್ನೆಯೇ ಬರುವುದಿಲ್ಲ. ಅಕ್ರಮ ಹಣದ ಗಳಿಕೆಯಿದ್ದರೆ ಮಾತ್ರ ಇಡಿಗೆ ಅಧಿಕಾರವಿದೆ. ಆಗ ಮಾತ್ರ ಇಡಿ ಸರ್ಚ್ ಮತ್ತು ಸೀಜ್ ಮಾಡಬಹುದು. ಆದರೆ ನಟೇಶ್ ಪ್ರಕರಣದಲ್ಲಿ ಇಡಿಯ ದಾಳಿ ಮತ್ತು ಸೀಜ್ ರದ್ದುಪಡಿಸಿದೆ. ಇಡಿ ಕಾನೂನು ಉಲ್ಲಂಘಿಸಿದೆ ಎಂದು ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದೆ ಎಂದು ವಾದ ಮಂಡಿಸಿದರು.
ಸಿಎಂ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಇಡಿ ಮೇಜರ್ ಟ್ವಿಸ್ಟ್ ನೀಡಿತ್ತು. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಮಾಡಿತ್ತು. ಇಡಿ ಬೆಂಗಳೂರು ವಲಯ ಕಚೇರಿಯ ಸಹಾಯಕ ನಿರ್ದೇಶಕ ವಿ. ಮುರಳಿಕೃಷ್ಣನ್ ಅವರು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಮಾಡಿದ್ದರು. ಇಡಿ ಸಮನ್ಸ್ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…