ರಾಜ್ಯ

ಮುಡಾ ಪ್ರಕರಣ: ಸಿಎಂ ಪತ್ನಿ, ಭೈರತಿ ಸುರೇಶ್‌ಗೆ ಕೊಂಚ ರಿಲೀಫ್‌

ಧಾರವಾಡ:  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ)ದ ನೋಟಿಸ್​ ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.

ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ನ್ಯಾ. ನಾಗಪ್ರಸನ್ನ ಅವರು 10 ದಿನಗಳ ಕಾಲ ಸಿಎಂ ಪತ್ನಿ ಮತ್ತು ಬೈರತಿ ಸುರೇಶ್‌ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಿ ಆದೇಶ ಪ್ರಕಟಿಸಿದರು.

ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ಗೆ ಹೈಕೋರ್ಟ್ ಮಧ್ಯಂತರ ರಕ್ಷಣೆ ಮುಂದುವರಿದಿದೆ. ಇಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಅವರು​ ಇಡಿ ಸಮನ್ಸ್ ಪ್ರಶ್ನಿಸಿ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಫೆಬ್ರವರಿ 10ರ ವರೆಗೆ ಇಡಿ ನೀಡಿದ್ದ ಸಮನ್ಸ್‌ಗೆ ತಡೆ ನೀಡಿದ್ದರು. ಇದೀಗ ಮತ್ತೆ ಫೆಬ್ರವರಿ 20 ರವರೆಗೆ ತಡೆಯಾಜ್ಞೆಯನ್ನು ವಿಸ್ತರಿಸಲಾಗಿದೆ.

ಮೊದಲು ಸಚಿವ ಬೈರತಿ ಸುರೇಶ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿವಿ ನಾಗೇಶ್, ಬೈರತಿ ಸುರೇಶ್ 2023ರ ಜೂನ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ ಇಡಿ ಪ್ರಶ್ನಾವಳಿಯಲ್ಲಿ ಅಪ್ಪ, ತಾತ, ಮಕ್ಕಳು, ಮೊಮ್ಮಕ್ಕಳ ಮಾಹಿತಿ ಎಲ್ಲಾ ನೀಡಿ ಎಂದು ಸಮನ್ಸ್ ಮಾಡಿದೆ. ಎಲ್ಲರ ಮಾಹಿತಿಯನ್ನು ಬ್ಯಾಂಕ್ ಡಿಟೈಲ್ಸ್ ಕೊಡಬೇಕೆಂದು ಇಡಿ ಕೇಳುತ್ತಿದೆ. ಸುರೇಶ್ ಗೂ ಈ ಪ್ರಕರಣ ಯಾವುದೇ ಸಂಬಂಧ ಇಲ್ಲ. ಪ್ರಕರಣದಲ್ಲಿ ಅವರು ಆರೋಪಿಯೂ ಅಲ್ಲ, ಆದರೂ ಕೂಡ ಇಡಿ ಸಮನ್ಸ್ ನೀಡಿದೆ.. ಹೀಗಾಗಿ ಕೋರ್ಟ್ ಗೆ ಬಂದಿದ್ದೇವೆ ಎಂದು ವಾದ ಮಂಡಿಸಿದರು.

ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ಅವರು, ಇಡಿ ಸಮನ್ಸ್ ಜಾರಿಗೊಳಿಸಿದಾಗ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ಈ ಬಗ್ಗೆ ಸುಪ್ರೀಂಕೋರ್ಟ್ ನ ಇತ್ತೀಚಿನ ತೀರ್ಪು ಇದೆ ಎಂದರು.

ಪ್ರಕರಣದಲ್ಲಿ ಸೈಟ್‌ಗಳನ್ನು ವಾಪಸ್ ಮಾಡಲಾಗಿದೆ.ಅಕ್ರಮ ಹಣ ವಗಾರ್ವಣೆ ಪ್ರಶ್ನೆಯೇ ಬರುವುದಿಲ್ಲ. ಅಕ್ರಮ ಹಣದ ಗಳಿಕೆಯಿದ್ದರೆ ಮಾತ್ರ ಇಡಿಗೆ ಅಧಿಕಾರವಿದೆ. ಆಗ ಮಾತ್ರ ಇಡಿ ಸರ್ಚ್ ಮತ್ತು ಸೀಜ್ ಮಾಡಬಹುದು. ಆದರೆ ನಟೇಶ್ ಪ್ರಕರಣದಲ್ಲಿ ಇಡಿಯ ದಾಳಿ ಮತ್ತು ಸೀಜ್ ರದ್ದುಪಡಿಸಿದೆ. ಇಡಿ ಕಾನೂನು ಉಲ್ಲಂಘಿಸಿದೆ ಎಂದು ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದೆ ಎಂದು ವಾದ ಮಂಡಿಸಿದರು.

ಸಿಎಂ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಇಡಿ ಮೇಜರ್ ಟ್ವಿಸ್ಟ್ ನೀಡಿತ್ತು. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಮಾಡಿತ್ತು. ಇಡಿ ಬೆಂಗಳೂರು ವಲಯ ಕಚೇರಿಯ ಸಹಾಯಕ ನಿರ್ದೇಶಕ ವಿ. ಮುರಳಿಕೃಷ್ಣನ್ ಅವರು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಮಾಡಿದ್ದರು. ಇಡಿ ಸಮನ್ಸ್ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

3 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

3 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

4 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

4 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

4 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

7 hours ago