ರಾಜ್ಯ

ಮುಡಾ ಕೇಸ್‌ ಬಗ್ಗೆ ಸುಪ್ರೀಂಕೋರ್ಟ್‌ ತೀರ್ಪು: ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಮೈಸೂರು ಮುಡಾ ಹಗರಣದ ಬಗ್ಗೆ ಸುಪ್ರೀಂಕೋರ್ಟ್‌ ತೀರ್ಪು ಹೊರಡಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸತ್ಯಮೇವ ಜಯತೆ ಎಂದು ಟ್ವೀಟ್‌ ಮಾಡಿ ಸಂಭ್ರಮಿಸಿದ್ದಾರೆ.

ಮೈಸೂರು ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇಡಿ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರಕ್ಕೆ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ.

ಸುಪ್ರೀಂಕೋರ್ಟ್‌ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.‌ಗವಾಯಿ ಮತ್ತು ಕೆ.ವಿ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತವಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂಕೋರ್ಟ್‌ ಆದೇಶ ಉಳಿಸಿಕೊಂಡು ಕಾಪಾಡಿದೆ.

ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಹಾಗೂ ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದದ್ದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ.

ಸುಪ್ರೀಂಕೋರ್ಟ್‌ ಈ ಕಣ್ಣು ತೆರೆಸುವ ಆದೇಶದ ನಂತರವಾದರೂ ಕೂಡ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಎಚ್ಚೆತ್ತುಕೊಂಡು ಐಟಿ, ಸಿಬಿಐ ಹಾಗೂ ಇಡಿಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಿ ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

5 mins ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

19 mins ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

29 mins ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

46 mins ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

57 mins ago

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

2 hours ago