ರಾಜ್ಯ

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ 15ಕ್ಕೆ ಮುಂದೂಡಿದೆ.

ಲೋಕಾಯುಕ್ತ ಹಾಗೂ ಇನ್ನಿತರ ಸಂಸ್ಥೆಗಳು ಈ ಪ್ರಕರಣವನ್ನು ಸರಿಯಾದ ದಾರಿಯಲ್ಲಿ ತನಿಖೆ ನಡೆಸುವುದಿಲ್ಲ. ಆದ್ದರಿಂದ ಸಿಬಿಐಗೆ ವಹಿಸಿ ವಿಚಾರಣೆ ನಡೆಸಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು.

ಇಂದು (ಡಿ.19) ಹೈಕೋರ್ಟ್‌ ಏಕ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, 2025 ಜನವರಿ 15ಕ್ಕೆ ವಿಚಾರಣೆಯನ್ನು ಮುಂದೂಡಿದ್ದಾರೆ.

ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಜಿ ರಾಘವನ್‌, ವಿಚಾರಣೆ ಆರಂಭವಾದ ನಂತರ ಎಲ್ಲಾ ಪ್ರತಿವಾದಿಗಳಿಗೂ ನೋಟಿಸ್‌ ಜಾರಿಯಾಗಿದೆ ಎಂದರು. ಇದೇ ವೇಳೆ ಕೋರ್ಟ್‌ ಎದುರಿನ ಬಿಲ್ಡಿಂಗ್‌ಗೆ ನೋಟಿಸ್‌ ಜಾರಿಮಾಡಲು 35 ದಿನ ಸಮಯ ತಗುಲಿರುವುದು ಶಾಕಿಂಗ್‌ ವಿಷಯ ಎಂದು ಪೀಠ ಅಭಿಪ್ರಾಯಪಟ್ಟಿತು.

ಡಿಸೆಂಬರ್‌ 24 ರೊಳಗೆ ಲೋಕಾಯುಕ್ತ ಪೊಲೀಸರು ವರದಿ ನೀಡಬೇಕಿತ್ತು. ಈಗ ವಿಚಾರಣೆಯನ್ನು ಜನವರಿ 15 ಕ್ಕೆ ಮುಂದೂಡಿರುವುದರಿಂದ ವರದಿ ನೀಡುವ ಅವಧಿಯನ್ನು ಜನವರಿ 28ಕ್ಕೆ ವಿಸ್ತರಣೆ ಮಾಡಿದೆ. ಅಲ್ಲದೇ ಲೋಕಾಯುಕ್ತ ಪೊಲೀಸರ ತನಿಖೆಗೆ ಯಾವುದೇ ಅಡಚಣೆ ಇಲ್ಲ ಎಂದು ನ್ಯಾಯಪೀಠ ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

8 mins ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

30 mins ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

2 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

3 hours ago