ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರ ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಇದೀಗ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಲಿರುವ ಸಾಧ್ಯತೆ ಇದೆ.
ಕೆಲವು ದಿನಗಳ ಹಿಂದೆ ದೂರುದಾರ ಸ್ನೇಹಮಯಿ ಕೃಷ್ಣ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಬಳಿಕ, ಎಫ್‌ಆರ್‌ಐ ದಾಖಲಾದ ನಂತರ ಮೈಸೂರು ಲೋಕಾಯುಕ್ತದ ಅಧಿಕಾರಿಗಳು ಪಾರದರ್ಶಕ, ನಿಷ್ಪಕ್ಷಪಾತ ಮತ್ತು ಪ್ರಾಮಾಣಿಕವಾಗಿ ತನಿಖೆ ನಡೆಸುವುದಿಲ್ಲ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಯಾಗಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಹೀಗಾಗಿ, ಇಂದು ಹೈಕೋರ್ಟ್ ಅರ್ಜಿ ವಿಚಾರಣೆಗೆ ಎತ್ತಿಕೊಳ್ಳುವ ಸಾಧ್ಯತೆ ಇದೆ. ಕೋರ್ಟ್ ಸಿಬಿಐ ತನಿಖೆಗೆ ಅನುಮತಿ ನೀಡುತ್ತದೆಯೋ ಅಥವಾ ಇಲ್ಲವೋ ಎಂಬುದನ್ನು ಇನ್ನಷ್ಟೆ ಕಾದು ನೋಡಬೇಕಾಗಿದೆ.
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…