Public inconvenience will not be tolerated: High Court warns transport employees
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಅಕ್ರಮವಾಗಿ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿದ್ದ ಏಕ ಸದಸ್ಯ ಪೀಠದ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸಂಬಂಧವಿಲ್ಲದಿದ್ದರೂ ಪ್ರಕರಣದಲ್ಲಿ ತಮ್ಮನ್ನು ಎಳೆದು ತರಲಾಗಿದೆ ಎಂದು ಆಕ್ಷೇಪಿಸಿ ವಿವಾದಿತ ಜಮೀನಿನ ಮಾಲೀಕ ಜೆ.ದೇವರಾಜು ಸಲ್ಲಿಸಿರುವ ಪ್ರತ್ಯೇಕ ಮೇಲ್ಮನವಿಗಳ ಕುರಿತು ನ್ಯಾ.ಅನು ಶಿವರಾಮನ್ ಹಾಗೂ ನ್ಯಾ.ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ಮೇಲ್ಮನವಿಗಳ ಅಂತಿಮ ವಿಚಾರಣೆ ನಡೆಸಬೇಕಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಆಗ ನ್ಯಾಯಪೀಠ, ಈ ಮೇಲ್ಮನವಿಗಳ ವಿಚಾರಣೆಯಂದು ಬೇರೆ ಅರ್ಜಿಗಳನ್ನು ಹೆಚ್ಚಾಗಿ ಪಟ್ಟಿ ಮಾಡುವುದಿಲ್ಲ. ಆದ್ದರಿಂದ, ನವೆಂಬರ್ ಮೊದಲ ವಾರದಲ್ಲಿ ಅರ್ಜಿ ವಿಚಾರಣೆ ನಡೆಸಬಹುದೇ ಎಂದು ಕೇಳಿತು. ಇದಕ್ಕೆ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ನವೆಂಬರ್ ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಗುರುವಾರ ವಿಚಾರಣೆಗೆ ನಿಗದಿಯಾಗಿದ್ದ ಮೇಲ್ಮನವಿಗಳ ವಿಚಾರಣೆಯನ್ನು ನವೆಂಬರ್ ಎರಡನೇ ವಾರಕ್ಕೆ ಮುಂದೂಡಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಮೇಲ್ಮನವಿಗಳನ್ನು ಅಂತಿಮವಾಗಿ ವಿಚಾರಣೆ ನಡೆಸಬೇಕಿದೆ ಎಂದರು.
ಇದಕ್ಕೆ ಮುಡಾ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಅವರು ನವೆಂಬರ್ ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಕೋರಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಇಂದು ವಿಚಾರಣೆಗೆ ಪಟ್ಟಿಯಾಗಿದ್ದ ಸಿದ್ದರಾಮಯ್ಯ ಸಲ್ಲಿಸಿರುವ ಒಂದು ಮತ್ತು ಜೆ ದೇವರಾಜು ಸಲ್ಲಿಸಿರುವ ಎರಡು ಮೇಲ್ಮನವಿಗಳು ವಿಚಾರಣೆಯನ್ನು ಮುಂದೂಡಿತು.
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…
ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…
ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…
ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…