ರಾಜ್ಯ

ಮೂಡಾ ಹಗರಣ| ಬಿಜೆಪಿಯಿಂದ ಅಹೋರಾತ್ರಿ ಧರಣಿ: ಸದನದಲ್ಲಿ ಹನುಮಾನ್‌ ಚಾಲೀಸ ಪಠಣ, ಶಾಸಕರಿಂದ ರಾಮ ಭಜನೆ

ಬೆಂಗಳೂರು: ಮೂಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಮೂಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ-ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು, ಸದನದಲ್ಲಿ ಹನುಮಾನ್‌ ಚಾಲೀಸ್‌ ಪಠಣ ಮಾಡುವ ಮೂಲಕ ಬಿಜೆಪಿ ಸದಸ್ಯರು ಗಮನ ಸೆಳೆದಿದ್ದಾರೆ. ಬಿಜೆಪಿ ಶಾಸಕರಾದ ಭಾಗೀರಥಿ ಮುರಳ್ಯ ಹಾಗೂ ವೇದವ್ಯಾಸ ಕಾಮತ್‌ ಸದನದಲ್ಲಿ ಧರಣಿವೇಳೆ ಹನುಮಾನ್‌ ಚಾಲೀಸ್‌ ಪಠಣ ಮಾಡಿದರು. ಈ ವೇಳೆ ಇತರ ಸದಸ್ಯರು ಸಾಥ್‌ ನೀಡಿದರು.

ಇನ್ನೂ ಈ ವೇಳೆ ಸದನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಆರ್‌ಎಸ್‌ಎಸ್‌ ಶಾಖೆಯ ಪ್ರಾರ್ಥನೆ ಮಾಡಲು ಮುಂದಾದರು. ಇದಕ್ಕೆ ವಿರೋಧ ಪಕ್ಷದ ನಾಯಕ ಬೇಡ ಎಂದು ಸೂಚಿಸಿದರು. ಹೀಗಾಗಿ ಪೂಂಜಾ ಸುಮ್ಮನಾದರು.

ಸರ್ಕಾರದ ಊಟ, ಹಾಸಿಗೆ ನಿರಾಕರಿಸಿದ ವಿಪಕ್ಷಗಳು
ಧರಣಿ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿ ಕಾರ್ಯದರ್ಶಿ ವಿಶಾಲಾಕ್ಷಿ ಶಾಸಕರಿಗೆ ರಾತ್ರಿ ಊಟದ ಬಗ್ಗೆ ವಿಚಾರಿಸಿದರು. ಈ ವೇಳೆ ಶಾಸಕರು ಹಗರಣದ ಹಣದ ಊಟದ ವ್ಯವಸ್ಥೆ ನಮಗೆ ಬೇಡ ಎಂದರು. ಜೊತೆಗೆ ರಾತ್ರಿಯ ಊಟ ಹಾಗೂ ಹಾಸಿಗೆ ವ್ಯವಸ್ಥೆಯನ್ನು ತಾವೇ ಮಾಡಿಕೊಳ್ಳುವುದಾಗಿ ತಿಳಿಸಿದರು. ಬಳಿಕ ಜಯನಗರ ಶಾಸಕ ಸಿ.ಕೆ ರಾಮಮೂರ್ತಿ ಅವರಿಗೆ ಸದಸ್ಯರಿಗೆ ಊಟ ಹಾಗೂ ಹಾಸಿಗೆ ವ್ಯವಸ್ಥೆ ಮಾಡುವ ಹೊಣೆ ನೀಡಿದರು.

ಏನಕ್ಕೆ ಧರಣಿ?
ಮೂಡಾ ಹಗರಣ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಬಿಜೆಪಿಯ ಸದಸ್ಯರು ಸದನದಲ್ಲಿ ಕೇಳಿದರು. ಈ ವೇಳೆ ಬಿಜೆಪಿಯ ನಿಲುವಳಿಯನ್ನು ಸ್ಪೀಕರ್‌ ಯು.ಟಿ ಖಾದರ್‌ ತಿರಸ್ಕರಿಸಿದರು. ಇದರಿಂದ ಮಾತಿನ ಚಕಮಕಿ, ಗದ್ದಲ, ಆರೋಪ-ಪ್ರತ್ಯರೋಪ ನಡೆದು ಪ್ರತಿಪಕ್ಷಗಳು ಸದನದ ಬಾವಿಗಿಳಿದು ಧರಣಿ ನಡೆಸಿತ್ತು. ಬಳಿಕ ಅಹೋರಾತ್ರಿ ಧರಣಿ ಘೋಷಣೆ ಮಾಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago