Mysore
19
overcast clouds
Light
Dark

ಮುಡಾ ಹಗರಣ: ಇಂದಿನಿಂದ 8 ದಿನಗಳ ಕಾಲ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ…

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಯು ಇಂದಿನಿಂದ ಆರಂಭವಾಗಲಿದೆ.

ಈ ಮೂಲಕ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮೈತ್ರಿ ಪಕ್ಷ ರಣಕಹಳೆ ಮೊಳಗಿಸಲಿದೆ. ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡ್ಯೊಯ್ಯಲು ಮೈತ್ರಿ ಪಕ್ಷವು ಜಂಟಿಯಾಗಿ ಅಖಾಡಕ್ಕೆ ಇಳಿದಿದ್ದು, ಇಂದು (ಆ.3) ಬೆಂಗಳೂರಿನ ಕೆಂಗೇರಿ ಕೆಂಪಮ್ಮ ದೇಗುಲ ಬಳಿ ಇರುವ ಜೆಕೆ ಗ್ರ್ಯಾಂಡ್‌ ಅರೆನಾ ಸೆಂಟರ್‌ನಿಂದ ಪಾದಯಾತ್ರೆ ಆರಂಭವಾಗಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಆಶೋಕ್‌ ಸೇರಿದಂತೆ ಮೈತ್ರಿ ಪಾಳಯದ ನಾಯಕರ ದಂಡೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದೆ.