ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಆಕ್ರಮ ನಿವೇಶನ ಹಂಚಿಕೆ ಸಂಬಂದಿಸಿಧಿಸಿದಂತೆ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ನಕಲಿ ದಾಖಲಿ ಸೃಷ್ಟಿಸಿ ಕೋಟ್ಯಾಂತರ ರೂ ಬೆಲೆ ಬಾಳುವ ನಿವೇಶನಗಳನ್ನು ಮರುಹಂಚಿಕೆ ಮಾಡಿ ವಂಚನೆ ಎಸಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಚಾರ್ಚ್‍ಶೀಟ್ ಸಲ್ಲಿಕೆ ಮಾಡಿದೆ.
ದಿನೇಶ್ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಈ ದಾಖಲೆಗಳ ಮೂಲಕ ಸೈಟ್‌ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ. ತಮ್ಮ ಕುಟುಂಬದವರ ಹೆಸರಿನಲ್ಲಿ ಬೇನಾಮಿಯಾಗಿ 25 ಕೋಟಿ ಹಾಗೂ ಮನೆಕೆಲಸದ ರಮೇಶ್ ಎಂಬುವರ ಹೆಸರನಲ್ಲಿಯೂ ಆಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಇಡಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಿದೆ.
ಇಂದು ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಇದೇ ಮೊದಲ ಬಾರಿಗೆ ಇ.ಡಿ ಚಾರ್ಚ್ ಶೀಟ್ ಸಲ್ಲಿಸಿರುವುದು ವಿಶೇಷ. ದಿನೇಶ್ ಕುಮಾರ್ ತಮ್ಮ ಮನೆಯ ಕೆಲಸದವನ ಹೆಸರಿನಲ್ಲಿಯೂ ಕೋಟಿ ಕೋಟಿ ಆಸ್ತಿ ಮಾಡಿರುವ ಆರೋಪವಿದೆ.
ನಕಲಿ ದಾಖಲೆಗಳನ್ನು ದಿನೇಶ್ ಕುಮಾರ್ ಸೃಷ್ಟಿ ಮಾಡಿ ಈ ದಾಖಲೆಗಳ ಮೂಲಕ ಸೈಟ್‌ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ. ಜಮೀನು ವಶಕ್ಕೆ ಪಡೆದು ನಿವೇಶನ ಕೊಟ್ಟಿದ್ದೇವೆ ಎಂದು ಸುಳ್ಳು ಹೇಳಿದ್ದ ದಿನೇಶ್ ಕುಮಾರ್, ತನಿಖೆ ವೇಳೆ ಜಮೀನು ವಶಕ್ಕೆ ಪಡೆಯದೇ ಪ್ರಭಾವಿಗಳಿಗೆ ಸೈಟು ಹಂಚಿಕೆ ಮಾಡಿರುವುದು ಸಾಬೀತಾಗಿದೆ. ಇನ್ನು ಕೋಟಿ ಕೋಟಿ ಬೆಲೆ ಬಾಳುವ ಸೈಟುಗಳನ್ನು ಲಕ್ಷ ರುಪಾಯಿಗೆ ಕೊಟ್ಟು ಕಿಕ್ ಬ್ಯಾಕ್ ಪಡೆದಿದ್ದ ದಿನೇಶ್ ಕುಮಾರ್, ಮುಡಾಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂಬುದು ತನಿಖೆಯಿಂದ ಬಹಿರಂಗವಾಗಿದೆ ಎಂಬುದು ಉಲ್ಲೇಖವಾಗಿದೆ.
ಕಳೆದ 2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು. ದಿನೇಶ್ ಕುಮಾರ್ ವಿರುದ್ಧ ಮುಡಾದಲ್ಲಿ 50:50 ಅನುಪಾತದಡಿ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು. ಯಾವುದೇ ಸ್ಥಳ ತೋರಿಸದೇ ದಿನೇಶ್ ಕುಮಾರ್ ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರ ನಂತರ ಹಾವೇರಿ ವಿವಿಯ ಕುಲಸಚಿವ ಹುದ್ದೆಯನ್ನು ನೀಡಿತ್ತು. ಕುಲಸಚಿವ ಹುದ್ದೆಯನ್ನು ನೀಡಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸರ್ಕಾರ ಕೊನೆಗೆ ಆ ಆದೇಶವನ್ನೇ ರದ್ದು ಮಾಡಿತ್ತು
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಅಕ್ರಮವಾಗಿ ನೀಡಿದ್ದ 440 ಕೋಟಿ ರೂ ಮೌಲ್ಯದ 252 ನಿವೇಶನಗಳನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿದೆ.
ಕೇಪ್ ಕೆನವೆರೆಲ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ.…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…