ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಗಂಗರಾಜು ಇ.ಡಿ. ವಿಚಾರಣೆಗೆ ಹಾಜರಾಗಿದ್ದಾರೆ.
ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಗೆ ಇಂದು(ನ.27) ಆರ್‌ಐಟಿ ಕಾರ್ಯಕರ್ತ ಗಂಗರಾಜು ದಾಖಲೆಗಳ ಸಮೇತ ಇ.ಡಿ. ತನಿಖಾ ಸಂಸ್ಥೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಮುಡಾ ಪ್ರಕರಣ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ದಿನ ಕಳೆದಂತೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಬೆನ್ನಲ್ಲೇ ಗಂಗರಾಜು ಇ.ಡಿ. ತನಿಖೆಗೆ ಹಾಜರಾಗಿದ್ದು, ಹಲವು ಮಾಹಿತಿಗಳನ್ನು ಅಧಿಕಾರಿಗಳಿಗೆ ನೀಡಲಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಇಂದು ಸಂಜೆಯವರೆಗೂ ಇ.ಡಿ. ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆಯಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ದೊರಯಲಿದೆ ಎಂದು ಹೇಳಲಾಗುತ್ತಿದೆ.
ಮುಡಾ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಗರಾಜು ಅವರು ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ಇ.ಡಿ. ಅಧಿಕಾರಿಗಳು ಇಂದು ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.
ಈ ನೋಟಿಸ್‌ನ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಕೆ ಮಾಡಿದ್ದ ಎಲ್ಲಾ ದಾಖಲೆಗಳೊಂದಿಗೆ ಇಡಿ ಕಚೇರಿಗೆ ಹಾಜರಾಗಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…