Mysore
14
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಸಿದ್ದಾಪರಾಧ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ʼಸಿದ್ದಾಪರಾಧʼ ಸಾಬೀತಿಗೆ ಇನ್ನೊಂದು ಹೆಜ್ಜೆ ಬಾಕಿ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಮುಡಾ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ತನಿಖಾ ಸ್ಥಿತಿ ನೆನೆದು ಪೋಸ್ಟ್‌ ಮಾಡಿದ್ದಾರೆ.

ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇ ಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೆ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿದ್ರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ಅದೇ ಲೋಕಾಯುಕ್ತವೇ ಗತಿ ಎಂದು ಅಪಹಾಸ್ಯ ಮಾಡಿದ್ದಾರೆ.

ಕರ್ಮ ಹಿಟ್‌ ಬ್ಯಾಕ್‌ ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನು ಹೈಕೋರ್ಟ್‌ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್‌ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಲೆಕ್ಕ ʼಸಿದ್ದಾಪರಾಧ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಇದೆ ಎಂಬುದನ್ನು ತಿಳಿಸಿದ್ದಾರೆ.

ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ? ಆದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರೀ? ಎಂದು ಪೋಸ್ಟ್‌ ಮಾಡುವ ಮೂಲಕ ಸಿದ್ದರಾಮಯ್ಯರಿಗೆ ಲೇವಡಿ ಮಾಡಿದ್ದಾರೆ.

 

Tags:
error: Content is protected !!