ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ʼಸಿದ್ದಾಪರಾಧʼ ಸಾಬೀತಿಗೆ ಇನ್ನೊಂದು ಹೆಜ್ಜೆ ಬಾಕಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಮುಡಾ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ತನಿಖಾ ಸ್ಥಿತಿ ನೆನೆದು ಪೋಸ್ಟ್ ಮಾಡಿದ್ದಾರೆ.
ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇ ಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೆ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿದ್ರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ಅದೇ ಲೋಕಾಯುಕ್ತವೇ ಗತಿ ಎಂದು ಅಪಹಾಸ್ಯ ಮಾಡಿದ್ದಾರೆ.
ಕರ್ಮ ಹಿಟ್ ಬ್ಯಾಕ್ ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನು ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಲೆಕ್ಕ ʼಸಿದ್ದಾಪರಾಧ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಇದೆ ಎಂಬುದನ್ನು ತಿಳಿಸಿದ್ದಾರೆ.
ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ? ಆದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರೀ? ಎಂದು ಪೋಸ್ಟ್ ಮಾಡುವ ಮೂಲಕ ಸಿದ್ದರಾಮಯ್ಯರಿಗೆ ಲೇವಡಿ ಮಾಡಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…