Mysore
20
clear sky

Social Media

ಶುಕ್ರವಾರ, 06 ಡಿಸೆಂಬರ್ 2024
Light
Dark

ಮುಡಾ ಪ್ರಕರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಡಿ.10ಕ್ಕೆ ಮುಂದೂಡಿದೆ.

ಈ ಕುರಿತು ಇಂದು(ನ.26) ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವೂ ಡಿಸೆಂಬಂರ್‌ 10ಕ್ಕೆ ಮುಂದೂಡಿದ್ದು, ಅಂದೇ ವಾದ-ಪ್ರತಿವಾದ ಮಂಡಿಸಲು ಆದೇಶ ಹೊರಡಿಸಿದ್ದಾರೆ.

ಮುಡಾದ 50:50 ಅನುಪಾತ ಬದಲಿ 14 ನಿವೇಶನಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಿಬಿಐ ತನಿಖಿಗೆ ಕೋರಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಈ ಅರ್ಜಿಯನ್ನು ಇಂದು ಹೈಕೋರ್ಟ್‌ ವಿಚಾರಣೆ ನಡೆಸಿ ಮುಂದೂಡಿಕೆ ಮಾಡಿದೆ.

Tags: