ರಾಜ್ಯ

ಮುಡಾ ಹಗರಣ: ಹೈಕೋರ್ಟ್‌ಗೆ, ಲೋಕಾಯುಕ್ತ ಪೊಲೀಸರಿಂದ ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಇಂದು ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ.

ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ದೂರುದಾರರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯೂ ಇಂದು(ಜನವರಿ.27) ಧಾರವಾಡ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ಈ ಮಧ್ಯೆಯೇ ಲೋಕಾಯುಕ್ತ ಎಸ್‌ಪಿ ಟಿ.ಜೆ. ಉದೇಶ್‌ ಅವರು ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಇನ್ನೂ ಸಿಬಿಐ ತನಿಖೆಗೆ ಕೋರಿರುವ ಅರ್ಜಿಯೂ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಅರ್ಜಿಯನ್ನು ವಿಚಾರಣೆಗೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಮಣಿಂಧರ್‌ ಸಿಂಗ್‌ ವಾದ ಮಂಡಿಸಿದ್ದು, ಈ ಪ್ರಕರಣದಲ್ಲಿ ನ್ಯಾಯವನ್ನು ಎತ್ತಿ ಹಿಡಿಯಲು ಸಿಬಿಐ ತನಿಖೆ ಅನಿವಾರ್ಯ. ಹೀಗಾಗಿ ಈ ಹಗರಣದ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

56 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

57 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

60 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

1 hour ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago