Mysore
23
scattered clouds
Light
Dark

ಮುಡಾ ಹಗರಣ: ಕೋರ್ಟ್‌ ತೀರ್ಮಾನದ ಬಳಿಕ ರಾಷ್ಟ್ರಪತಿ ಭೇಟಿ ಬಗ್ಗೆ ನಿರ್ಧಾರ ಎಂದ ಪರಮೇಶ್ವರ್‌

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತೀರ್ಪು ಬಂದ ಬಳಿಕವೇ ರಾಷ್ಟ್ರಪತಿ ಭೇಟಿ ಬಗ್ಗೆ ನಿರ್ಧಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಗಸ್ಟ್.‌31ರಂದು ಪಕ್ಷದ ವತಿಯಿಂದ ಪ್ರತಿಭಟನೆ ಮಾಡುತ್ತೇವೆ. ಶಾಸಕರೆಲ್ಲರೂ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೇವೆ. ನಾವೆಲ್ಲಾ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ಮಾಡುತ್ತೇವೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಯಾವ ತೀರ್ಪು ಬರುತ್ತೆ ನೋಡಬೇಕು. ಆ ನಂತರ ರಾಷ್ಟ್ರಪತಿ ಭೇಟಿ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು.

ಇನ್ನು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರೊಚ್ಚಿಗೆದ್ದಿರುವ ಕಾಂಗ್ರೆಸ್‌ ನಾಯಕರು, ಗವರ್ನರ್‌ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಆಗಸ್ಟ್.‌31ರಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ರಾಜಭವನ ಚಲೋಗೆ ಕರೆ ನೀಡಿದ್ದಾರೆ. ಇನ್ನು ಮುಡಾ ಹಗರಣ ಸಂಬಂಧ ನಾಳೆ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದರೆ ನಾಳೆಯಿಂದ ಪ್ರತಿಭಟನೆ ತೀವ್ರಗೊಳ್ಳುವುದು ಪಕ್ಕಾ ಎನ್ನಲಾಗುತ್ತಿದೆ.