ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತೀರ್ಪು ಬಂದ ಬಳಿಕವೇ ರಾಷ್ಟ್ರಪತಿ ಭೇಟಿ ಬಗ್ಗೆ ನಿರ್ಧಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಗಸ್ಟ್.31ರಂದು ಪಕ್ಷದ ವತಿಯಿಂದ ಪ್ರತಿಭಟನೆ ಮಾಡುತ್ತೇವೆ. ಶಾಸಕರೆಲ್ಲರೂ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೇವೆ. ನಾವೆಲ್ಲಾ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ಮಾಡುತ್ತೇವೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಯಾವ ತೀರ್ಪು ಬರುತ್ತೆ ನೋಡಬೇಕು. ಆ ನಂತರ ರಾಷ್ಟ್ರಪತಿ ಭೇಟಿ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು.
ಇನ್ನು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರೊಚ್ಚಿಗೆದ್ದಿರುವ ಕಾಂಗ್ರೆಸ್ ನಾಯಕರು, ಗವರ್ನರ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಆಗಸ್ಟ್.31ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜಭವನ ಚಲೋಗೆ ಕರೆ ನೀಡಿದ್ದಾರೆ. ಇನ್ನು ಮುಡಾ ಹಗರಣ ಸಂಬಂಧ ನಾಳೆ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದರೆ ನಾಳೆಯಿಂದ ಪ್ರತಿಭಟನೆ ತೀವ್ರಗೊಳ್ಳುವುದು ಪಕ್ಕಾ ಎನ್ನಲಾಗುತ್ತಿದೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…