ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ತಾಕತ್ ಇದ್ರೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದರು.
ವಿಧಾನಸೌಧದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದ ಅಕ್ರಮಗಳ ವಿರುದ್ಧ ಸದನದ ಹೊರಗೆ ಒಳಗೆ ಹೋರಾಟ ಮಾಡುತ್ತೇವೆ. ಮುಖ್ಯಮಂತ್ರಿ ಸ್ಥಾನದಲ್ಲಿ ಕೂರುವ ನೈತಿಕತೆ ಕಳೆದುಕೊಂಡಿದ್ದಾರೆ. ರಾಜೀನಾಮೆ ಕೊಡುವವರೆಗೂ ನಾವು ಹೋರಾಟ ಮಾಡುತ್ತೇವೆ. ಸಿಎಂ ಗೆ ತಾಕತ್ ಇದ್ರೆ ಸಿಬಿಐ ತನಿಖೆಗೆ ಕೊಡಬೇಕು. ನ್ಯಾಯಾಂಗ ತನಿಖೆ ಅಂತ ನಾಟಕ ಮಾಡುತ್ತಿದ್ದಾರೆ. ಇದೊಂದು ದೊಡ್ಡ ಹಗರಣ. ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ದಲಿತರ ಹಣ ದೋಚಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲಾಗಿದೆ. ಸಿಎಂ ನೈತಿಕತೆ ಕಳೆದುಕೊಂಡಿದ್ದಾರೆ. ಡಿಸಿರಂ ಆರೋಪಿಗಳಿಗೆ ಕ್ಲೀನ್ ಚಿಟ್ ಕೊಡ್ತಾ ಇದ್ದಾರೆ. ಮುಡಾ ಹಗರಣ ಸಿಬಿಐಗೆ ವಹಿಸಿ, ವಾಲ್ಮೀಕಿ ಹಗರಣಕ್ಕೆ ಸಿಎಂ ಉತ್ತರ ಕೊಡಬೇಕು ಎಂದು ಹೇಳಿದರು.