ರಾಜ್ಯ

ಸಿಎಂಗೆ ತಾಕತ್ ಇದ್ರೆ ಮುಡಾ ಹಗರಣ ಸಿಬಿಐ ತನಿಖೆಗೆ ಕೊಡಬೇಕು ; ಬಿ.ವೈ ವಿಜಯೇಂದ್ರ

ಬೆಂಗಳೂರು :  ಸಿಎಂ ಸಿದ್ದರಾಮಯ್ಯ ಅವರಿಗೆ ತಾಕತ್‌ ಇದ್ರೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದರು.

ವಿಧಾನಸೌಧದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು,  ಸರ್ಕಾರದ ಅಕ್ರಮಗಳ ವಿರುದ್ಧ ಸದನದ ಹೊರಗೆ ಒಳಗೆ ಹೋರಾಟ ಮಾಡುತ್ತೇವೆ. ಮುಖ್ಯಮಂತ್ರಿ ಸ್ಥಾನದಲ್ಲಿ ಕೂರುವ ನೈತಿಕತೆ ಕಳೆದುಕೊಂಡಿದ್ದಾರೆ. ರಾಜೀನಾಮೆ ಕೊಡುವವರೆಗೂ ನಾವು ಹೋರಾಟ ಮಾಡುತ್ತೇವೆ. ಸಿಎಂ ಗೆ ತಾಕತ್‌ ಇದ್ರೆ ಸಿಬಿಐ ತನಿಖೆಗೆ ಕೊಡಬೇಕು. ನ್ಯಾಯಾಂಗ ತನಿಖೆ ಅಂತ ನಾಟಕ ಮಾಡುತ್ತಿದ್ದಾರೆ. ಇದೊಂದು ದೊಡ್ಡ ಹಗರಣ. ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ದಲಿತರ ಹಣ ದೋಚಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಬಂಡವಾಳ ಬಯಲಾಗಿದೆ. ಸಿಎಂ ನೈತಿಕತೆ ಕಳೆದುಕೊಂಡಿದ್ದಾರೆ.  ಡಿಸಿರಂ ಆರೋಪಿಗಳಿಗೆ ಕ್ಲೀನ್‌ ಚಿಟ್‌ ಕೊಡ್ತಾ ಇದ್ದಾರೆ. ಮುಡಾ ಹಗರಣ ಸಿಬಿಐಗೆ ವಹಿಸಿ, ವಾಲ್ಮೀಕಿ ಹಗರಣಕ್ಕೆ ಸಿಎಂ ಉತ್ತರ ಕೊಡಬೇಕು ಎಂದು ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಬಹೂರೂಪಿ | ಜಾನಪದ ಉತ್ಸವಕ್ಕೆ ಚಾಲನೆ

ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…

1 hour ago

ಸಂಗ್ರಹಾಲಯವಾಗಿ ಕುವೆಂಪು ಅವರ ಉದಯರವಿ ಮನೆ

ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…

1 hour ago

ಮ.ಬೆಟ್ಟ ಮಾರ್ಗದಲ್ಲಿ ಚಿರತೆ ಪ್ರತ್ಯಕ್ಷ : ಎಚ್ಚರಿಕೆಯ ಸಂಚಾರಕ್ಕೆ ಕೋರಿಕೆ

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…

2 hours ago

ದ್ವೇಷ ಮರೆಯಿರಿ, ಪ್ರೀತಿ ಗಳಿಸಿ : ಡಿ.ಆರ್.ಪಾಟೀಲ್ ಕರೆ

ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…

2 hours ago

ಡ್ಯಾಡ್ ಈಸ್‌ ಹೋಂ | ಎಚ್‌ಡಿಕೆ ಎಂಟ್ರಿಗೆ ಡಿಕೆಶಿ, ಸಿದ್ದು ಶಾಕ್‌ ; ಸಂಚಲನ ಮೂಡಿಸುತ್ತಿರುವ AI ವಿಡಿಯೋ

ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…

2 hours ago

ಸೋಮನಾಥದಲ್ಲಿ ಶೌರ್ಯ ಯಾತ್ರೆ

ಸೋಮನಾಥ : ಗುಜರಾತ್‌ನ ಗಿರ್‌ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…

2 hours ago