ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನವರಿ 25ಕ್ಕೆಮುಂದೂಡಲಾಗಿದೆ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ಈ ಕುರಿತು ಇಂದು(ಡಿ.5) ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ವಿಚಾರಣೆ ನಡೆಸಿ, ಪ್ರತಿವಾದಗಳಿಗೆ ನೋಟಿಸ್ ನೀಡಿ ಈ ಅರ್ಜಿ ವಿಚಾರಣೆಯನ್ನು 2025ರ ಜನವರಿ 25ಕ್ಕೆ ಮುಂದೂಡಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.
ಈ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದ ವಕೀಲ ಕಪಿಲ್ ಸಿಬಲ್ ಅವರು ರಾಜ್ಯಪಾಲರು ಯಾವುದೇ ಪ್ರಾಥಮಿಕ ತನಿಖೆ ಮಾಡದೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರಿಗೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಅಧಿಕಾರವಿಲ್ಲ. ಸಾಂವಿಧಾನಿಕ ಪೀಠದ ತೀರ್ಪಿನ ಪ್ರಕಾರ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯುವ ಅಧಿಕಾರ ಸಭಾಪತಿಗಳಿಗೆ ಇದೆ. ಆದರೆ ರಾಜ್ಯಪಾಲರಿಗೆ ತನಿಖೆ ಮಾಡುವ ಯಾವ ಅಧಿಕಾರ ಇದೆ? ರಾಜ್ಯಪಾಲರು ಮುಡಾ ಪ್ರಕರಣವನ್ನು ರಾಷ್ಟ್ರಪತಿಗೆ ವರ್ಗಾಯಿಸಬಹುದಿತ್ತು ಎಂದು ಹೇಳಿದ್ದಾರೆ.
ಹೈಕೋರ್ಟ್ ಏಕ ಸದಸ್ಯ ಪೀಠವೂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಹುದೆಂಬ ಆದೇಶ ನೀಡಿತ್ತು. ಈ ಆದೇಶದ ಮೇರೆಗೆ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಆದರೆ ರಾಜ್ಯಪಾಲರ ಆದೇಶದ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರ ಪರ ವಕೀಲ ಅಭೀಷೇಕ್ ಸಿಂಘ್ವಿ ಹೈಕೋರ್ಟ್‌ನಲ್ಲಿ ರಾಜ್ಯಪಾಲರ ವಿರುದ್ಧ ವಿಚಾರಣಾ ಅರ್ಜಿ ಸಲ್ಲಿಸಿದ್ದರು.
ಏನಿದು ಪ್ರಕರಣ?
ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು 50:50 ಅನುಪಾತದ ಬದಲಿ 14 ನಿವೇಶನಗಳಿಗೆ ಸಂಬಂಧಿಸಿದಂತೆ ತಮ್ಮ ರಾಜಕೀಯ ಪ್ರಭಾವ ಬೀರಿ ನಿವೇಶನಗಳನ್ನು ಪಡೆದು ಹಗರಣ ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ದೂರುದಾರರ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು.
ಈ ದೂರಿನ ಆಧಾರದ ಮೇಲೆ ರಾಜ್ಯಪಾಲರು ಹೈಕೋರ್ಟ್‌ನ ಏಕ ಸದಸ್ಯ ಪೀಠಕ್ಕೆ ಸಿಎಂ ಸಿದ್ದರಾಮಯ್ಯ
ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಹುದೆಂಬ ಪ್ರಶ್ನೆ ಕೋರಿ ವಿಚಾರಣಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಹುದು ಎಂದು ತೀರ್ಪು ಪ್ರಕಟಿಸಿತ್ತು.
ಹೈಕೋರ್ಟ್‌ನ ಏಕ ಸದಸ್ಯ ಪೀಠದ ತೀರ್ಪಿನ ಅನ್ವಯ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ತನಿಖೆ ನಡೆಸುವಂತೆ ಆದೇಶ ಹೊರಡಿಸಿದ್ದರು. ರಾಜ್ಯಪಾಲರ ಈ ಆದೇಶವನ್ನು ಪ್ರಶ್ನಿಸಿ
ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…