ಬೆಂಗಳೂರು: ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್ ಹೆಚ್ಚಿದನ್ನೇ ಮಹಾನ್ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಸಮೇತ ಸಾಕ್ಷಿ ನೀಡಿರುವ ಸಿಎಂ ಸಿದ್ದರಾಮಯ್ಯ ಮುಡಾ ದಾಖಲೆಗಳಲ್ಲಿ ವೈಟ್ನರ್ ಹಚ್ಚಿ ಅಕ್ರಮ ಮರೆ ಮಾಚಿದ್ದಾರೆ ಎಂಬ ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.
ವಿಡಿಯೋ ಪೋಸ್ಟ್‌ನಲ್ಲಿ ಏನಿದೆ?
ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲ್ಕೈದು ಪದಗಳಿಗೆ ವೈಟ್ನರ್ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದಿದ್ದಾರೆ.
“ವೈಟ್ನರ್ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್ ಹಚ್ಚಿ ಬಂದಿದ್ದಾರೆಂದು” ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ ಎಂದು ವಿಪಕ್ಷ ನಾಯಕರನ್ನು ಟೀಕಿಸಿದ್ದಾರೆ.
ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ ಎಂದು ಸಿಎಂ ಬರೆದುಕೊಂಡಿದ್ದಾರೆ.
ಮಂಡ್ಯ: ರಾಜಕಾರಣಿಗಳನ್ನು ಹೆದರಿಸ ಬಲ್ಲಂತಹ ಶಕ್ತಿ ಸಾಹಿತ್ಯಕ್ಕಿದೆ. ಹಾಗಾಗಿ ರಾಜ ಕಾರಣಿಗಳು ಹಾದಿ ತಪ್ಪದಂತೆ ಸಾಹಿತಿಗಳು ಎಚ್ಚರಿಸಬೇಕು ಎಂದು ಕಾನೂನು…
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…