ರಾಜ್ಯ

ಬಗೆದಷ್ಟು ಬಯಲಾದ ಮುಡಾ ಹಗರಣ: ಉದ್ಯಮಿ ಜಯರಾಂ ನಿವಾಸದಲ್ಲಿ ಮಹತ್ವದ ದಾಖಲೆ ಕಲೆಹಾಕಿದ ಇ.ಡಿ.

ಬೆಂಗಳೂರು/ಮೈಸೂರು: ಮುಡಾ ಹಗರಣದಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದ್ದು, ಇದೀಗ ಉದ್ಯಮಿ ಜಯರಾಂ ಅವರ ನಿವಾಸ ವಕ್ರತುಂಡದಲ್ಲಿ ಸುಮಾರು 70 ಗಂಟೆಗಳ ಕಾಲ ವಿಚಾರಣೆ ನಡೆಸಿ, ಅನೇಕ ಬೇನಾಮಿ ಆಸ್ತಿ ಅಕ್ರಮವಾಗಿದೆ ಎಂದು ತಿಳಿಸಿದೆ.

ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಹಂಚಿಕೆ ಮಾಡಿರುವ ಮುಡಾ ನಿವೇಶನದಲ್ಲಿ ಅವ್ಯವಹಾರ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು 2024ರ ಅಕ್ಟೋಬರ್‌ 29 ರಂದು ಉದ್ಯಮಿ ಜಯರಾಂ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು. ಈ ದಾಳಿಯ ವೇಳೆ ಸುಮಾರು 300 ಕೋಟಿ ರೂ.ಮೌಲ್ಯದ ಬೇನಾಮಿ ಆಸ್ತಿಯೂ ಮುಡಾದಲ್ಲಿ ಹಗರಣವಾಗಿದೆ ಎಂದು ಇ.ಡಿ. ಸಂಸ್ಥೆಯೂ ತಿಳಿಸಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ತನಿಖೆ ನಡೆಸುವ ವೇಳೆ ಉದ್ಯಮಿ ಜಯರಾಂ ಅವರ ನಿವಾಸದಲ್ಲಿ ಮುಡಾ ಹಗರಣದ ಮಹತ್ವದ ಡೈರಿ ಹಾಗೂ ವ್ಯಾಟ್ಸ್‌ಹ್ಯಾಪ್‌ನಲ್ಲಿ ಹಗರಣ ಬಯಲಾಗಿದ್ದು, ವಿವಿಧ ರಿಯಲ್‌ ಎಸ್ಟೇಟ್‌ ಉದ್ಯಮಿ, ಏಜೆಂಟ್‌ ಹಾಗೂ ರಾಜಕಾರಣಿಗಳ ಹೆಸರು ಉಲ್ಲೇಖವಾಗಿದೆ.

ಮುಡಾ ಹಗರಣದಲ್ಲಿ ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡುವ ಸಲುವಾಗಿ ವಂಚಕರು ʼಕೋಕ್‌ನೆಟ್‌ʼ ಎಂಬ ಕೋಡ್‌ವರ್ಡ್‌ ಇಟ್ಟುಕೊಂಡು ಹಣವನ್ನು ವರ್ಗಾವಣೆ ಮಾಡುತ್ತಿದ್ದರು. ಈ ಮಾಹಿತಿಯೂ ಜಯರಾಂ ಅವರ ವಾಟ್ಸ್‌ಹ್ಯಾಪ್‌ನಿಂದ ತಿಳಿದು ಬಂದಿದೆ. ಅಲ್ಲದೇ ಇ.ಡಿ.ಅಧಿಕಾರಿಗಳಿಗೆ ಸಿಕ್ಕಿರುವ ಡೈರಿಯಲ್ಲಿ ಮಾಜಿ ಮುಡಾ ಆಯುಕ್ತರಾದ ತೇಜಸ್‌ ಗೌಡ ಹಾಗೂ ದಿನೇಶ್‌ ಅವರ ಹೆಸರನ್ನು ದಾಖಲಿಸಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅರ್ಚನ ಎಸ್‌ ಎಸ್

Recent Posts

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌…

43 mins ago

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…

1 hour ago

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…

2 hours ago

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

4 hours ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

4 hours ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

4 hours ago