ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿಗಳ ನಿವೇಶನ ಹಂಚಿಕೆ ಅಕ್ರಮ ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್‌ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಶಾಕ್ ನೀಡಿದೆ.
ಇಡಿ ಬಂಧನದಿಂದ ಬಿಡುಗಡೆ ಕೋರಿ ದಿನೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ತಿರಸ್ಕರಿಸಿದೆ. ಹಾಗಾಗಿ, ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದಿನೇಶ್ ಕುಮಾರ್ ಕಾರಾಗೃಹದಲ್ಲಿಯೇ ಇರಬೇಕಾದ ಸ್ಥಿತಿ ಎದುರಾಗಿದೆ. ವಾದ – ಪ್ರತಿವಾದ ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಪೀಠ ಪ್ರಕಟಿಸಿದೆ.
ಅರ್ಜಿದಾರರ ಪರ ವಕೀಲರು, ಮುಡಾ ಮಾಜಿ ಆಯುಕ್ತರು ಪ್ರಕರಣದ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ. ನ್ಯಾಯಾಲಯ ವಿಽಸುವ ಷರತ್ತುಗಳನ್ನು ಪಾಲಿಸಲು ಸಿದ್ಧರಿದ್ದಾರೆ. ಹಾಗಾಗಿ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಕೋರಿದ್ದರು.
ಆದರೆ, ಇಡಿ ಪರ ವಕೀಲರು, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಮೇಲ್ನೋಟಕ್ಕೆ ಸಾಕಷ್ಟು ಸಾಕ್ಷ್ಯಾಧಾರಗಳು ಲಭ್ಯವಾಗಿವೆ. ಈಗಾಗಲೇ ಆರೋಪಪಟ್ಟಿ ಸಲ್ಲಿಸಲಾಗಿದ್ದು, ಅದರಲ್ಲಿ ಎಲ್ಲಾ ವಿವರಗಳನ್ನು ಉಲ್ಲೇಖಿಸಲಾಗಿದೆ. ಆರೋಪಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಅವರನ್ನು ಬಿಡುಗಡೆ ಮಾಡಬಾರದು, ಎಂದು ಕೋರಿದ್ದರು.
ದಿನೇಶ್ ನ್ಯಾಯಾಂಗ ಬಂಧನದಲ್ಲಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಆಯುಕ್ತರಾಗಿದ್ದ ಅವಧಿಯಲ್ಲಿ ಜಿ.ಟಿ.ದಿನೇಶ್ ಕುಮಾರ್ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಅನರ್ಹರಿಗೆ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆಂಬ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಪಿಎಂಎಲ್‌ಎ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಜಾರಿ ನಿರ್ದೇಶನಾಲಯ ೨೦೨೫ರ ಸೆ.೧೭ರಂದು ದಿನೇಶ್‌ರನ್ನು ಬಂಧಿಸಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪ್ರಕರಣದ ಹಿನ್ನೆಲೆ
ಇಡಿ ದಿನೇಶ್ ಕುಮಾರ್‌ಗೆ ಸೇರಿದ ಸುಮಾರು ೪೦ ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಅಷ್ಟೇ ಅಲ್ಲದೆ, ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ೨೦೨೫ರ ನ.೧೯ರಂದು ಆರೋಪಪಟ್ಟಿಯನ್ನೂ ಸಲ್ಲಿಸಿದೆ. ಆಯುಕ್ತರಾಗಿದ್ದ ಸಮಯದಲ್ಲಿ ಅನರ್ಹರಿಗೆ ಒಟ್ಟು ೪೫೦ ಕೋಟಿ ರೂ.ಗಳಿಗೂ ಅಧಿಕ ಬೆಲೆಬಾಳುವ ೨೮೩ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ೨೦೨೫ರ ಅ.೧೦ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದಿನೇಶ್ ಕುಮಾರ್ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹಾಗಾಗಿ, ಅವರು ಹೈಕೋರ್ಟ್ ಮೊರೆ ಹೋಗಿದ್ದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…