ರಾಜ್ಯ

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿಗಳ ನಿವೇಶನ ಹಂಚಿಕೆ ಅಕ್ರಮ ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್‌ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಶಾಕ್ ನೀಡಿದೆ.

ಇಡಿ ಬಂಧನದಿಂದ ಬಿಡುಗಡೆ ಕೋರಿ ದಿನೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ತಿರಸ್ಕರಿಸಿದೆ. ಹಾಗಾಗಿ, ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದಿನೇಶ್ ಕುಮಾರ್ ಕಾರಾಗೃಹದಲ್ಲಿಯೇ ಇರಬೇಕಾದ ಸ್ಥಿತಿ ಎದುರಾಗಿದೆ. ವಾದ – ಪ್ರತಿವಾದ ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಪೀಠ ಪ್ರಕಟಿಸಿದೆ.

ಅರ್ಜಿದಾರರ ಪರ ವಕೀಲರು, ಮುಡಾ ಮಾಜಿ ಆಯುಕ್ತರು ಪ್ರಕರಣದ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ. ನ್ಯಾಯಾಲಯ ವಿಽಸುವ ಷರತ್ತುಗಳನ್ನು ಪಾಲಿಸಲು ಸಿದ್ಧರಿದ್ದಾರೆ. ಹಾಗಾಗಿ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಕೋರಿದ್ದರು.

ಆದರೆ, ಇಡಿ ಪರ ವಕೀಲರು, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಮೇಲ್ನೋಟಕ್ಕೆ ಸಾಕಷ್ಟು ಸಾಕ್ಷ್ಯಾಧಾರಗಳು ಲಭ್ಯವಾಗಿವೆ. ಈಗಾಗಲೇ ಆರೋಪಪಟ್ಟಿ ಸಲ್ಲಿಸಲಾಗಿದ್ದು, ಅದರಲ್ಲಿ ಎಲ್ಲಾ ವಿವರಗಳನ್ನು ಉಲ್ಲೇಖಿಸಲಾಗಿದೆ. ಆರೋಪಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಅವರನ್ನು ಬಿಡುಗಡೆ ಮಾಡಬಾರದು, ಎಂದು ಕೋರಿದ್ದರು.

ದಿನೇಶ್ ನ್ಯಾಯಾಂಗ ಬಂಧನದಲ್ಲಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಆಯುಕ್ತರಾಗಿದ್ದ ಅವಧಿಯಲ್ಲಿ ಜಿ.ಟಿ.ದಿನೇಶ್ ಕುಮಾರ್ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಅನರ್ಹರಿಗೆ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆಂಬ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಪಿಎಂಎಲ್‌ಎ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಜಾರಿ ನಿರ್ದೇಶನಾಲಯ ೨೦೨೫ರ ಸೆ.೧೭ರಂದು ದಿನೇಶ್‌ರನ್ನು ಬಂಧಿಸಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಕರಣದ ಹಿನ್ನೆಲೆ
ಇಡಿ ದಿನೇಶ್ ಕುಮಾರ್‌ಗೆ ಸೇರಿದ ಸುಮಾರು ೪೦ ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಅಷ್ಟೇ ಅಲ್ಲದೆ, ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ೨೦೨೫ರ ನ.೧೯ರಂದು ಆರೋಪಪಟ್ಟಿಯನ್ನೂ ಸಲ್ಲಿಸಿದೆ. ಆಯುಕ್ತರಾಗಿದ್ದ ಸಮಯದಲ್ಲಿ ಅನರ್ಹರಿಗೆ ಒಟ್ಟು ೪೫೦ ಕೋಟಿ ರೂ.ಗಳಿಗೂ ಅಧಿಕ ಬೆಲೆಬಾಳುವ ೨೮೩ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ೨೦೨೫ರ ಅ.೧೦ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದಿನೇಶ್ ಕುಮಾರ್ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹಾಗಾಗಿ, ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

1 hour ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

2 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

2 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

3 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

6 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

11 hours ago