Mysore
24
scattered clouds

Social Media

ಮಂಗಳವಾರ, 18 ಮಾರ್ಚ್ 2025
Light
Dark

ಮುಡಾ ಬದಲಿ ನಿವೇಶನ ವಾಪಸ್‌ ವಿಚಾರಕ್ಕೆ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ

ಬೆಂಗಳೂರು: ಮುಡಾದ 14 ಬದಲಿ ನಿವೇಶನಗಳನ್ನು ವಾಪಸ್ಸು ನೀಡಿರುವುದು ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಾಟಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್‌ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಎಫ್‌ಆರ್‌ಐ ದಾಖಲಿಸುವಂತೆ ಆದೇಶಿಸಿ ತನಿಖೆ ನಡೆಸಲು ಹೇಳಿದೆ. ನಿನ್ನೆ ಇ.ಡಿ ಕೇಸ್‌ ದಾಖಲಾಗಿದೆ. ಆದರೆ, ಇದೀಗ ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯ ತಮ್ಮ ಪತ್ನಿಗೆ ಹೇಳಿ ನಿವೇಶನಗಳನ್ನು ವಾಪಸ್ಸು ನೀಡಿರುವುದು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರು ರಾಜಕೀಯ ಸಹಾನುಭೂತಿ ಪಡೆಯಲು, ಅಧಿಕಾರಕ್ಕಾಗಿ ಮತ್ತು ತೊಡೆ ತಟ್ಟುವ ಸ್ವಪಕ್ಷೀಯದವರನ್ನು ಸುಮ್ಮನಾಗಿಸಲು ನಿವೇಶನಗಳನ್ನು ವಾಪಸ್‌ ನೀಡುವ ಮೂಲಕ ರಾಜಕೀಯ ನಾಟಕ ಮಾಡುತ್ತಿದ್ದಾರೆ. ಅಲ್ಲದೇ ಸಿಎಂ ಹುದ್ದೆಗೆ ಯಾವುದೇ ಕ್ಷಣದಲ್ಲಿ ಬೇಕಾದರೂ ರಾಜೀನಾಮೆ ನೀಡಬಹುದು. ಈ ವಿಚಾರ ಸಹ ಕೆಲವೇ ಗಂಟೆಗಳಲ್ಲಿ ನಡೆದರೂ ಆಶ್ಚರ್ಯವಿಲ್ಲ ಎಂದು ಲೇವಡಿ ಮಾಡಿದರು.

 

Tags: