ಬೆಂಗಳೂರು: ಮುಡಾದ 14 ಬದಲಿ ನಿವೇಶನಗಳನ್ನು ವಾಪಸ್ಸು ನೀಡಿರುವುದು ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಾಟಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಎಫ್‌ಆರ್‌ಐ ದಾಖಲಿಸುವಂತೆ ಆದೇಶಿಸಿ ತನಿಖೆ ನಡೆಸಲು ಹೇಳಿದೆ. ನಿನ್ನೆ ಇ.ಡಿ ಕೇಸ್ ದಾಖಲಾಗಿದೆ. ಆದರೆ, ಇದೀಗ ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯ ತಮ್ಮ ಪತ್ನಿಗೆ ಹೇಳಿ ನಿವೇಶನಗಳನ್ನು ವಾಪಸ್ಸು ನೀಡಿರುವುದು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಅವರು ರಾಜಕೀಯ ಸಹಾನುಭೂತಿ ಪಡೆಯಲು, ಅಧಿಕಾರಕ್ಕಾಗಿ ಮತ್ತು ತೊಡೆ ತಟ್ಟುವ ಸ್ವಪಕ್ಷೀಯದವರನ್ನು ಸುಮ್ಮನಾಗಿಸಲು ನಿವೇಶನಗಳನ್ನು ವಾಪಸ್ ನೀಡುವ ಮೂಲಕ ರಾಜಕೀಯ ನಾಟಕ ಮಾಡುತ್ತಿದ್ದಾರೆ. ಅಲ್ಲದೇ ಸಿಎಂ ಹುದ್ದೆಗೆ ಯಾವುದೇ ಕ್ಷಣದಲ್ಲಿ ಬೇಕಾದರೂ ರಾಜೀನಾಮೆ ನೀಡಬಹುದು. ಈ ವಿಚಾರ ಸಹ ಕೆಲವೇ ಗಂಟೆಗಳಲ್ಲಿ ನಡೆದರೂ ಆಶ್ಚರ್ಯವಿಲ್ಲ ಎಂದು ಲೇವಡಿ ಮಾಡಿದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…