ರಾಜ್ಯ

ಸಿಎಂ ಪತ್ನಿ ಮುಡಾ ಸೈಟ್‌ ವಾಪಸ್:‌ ನ್ಯಾಯಾಲಯದ ಆದೇಶದ ಉಲ್ಲಂಘನೆ ಎಂದ HD ಕುಮಾರಸ್ವಾಮಿ

ಕೋರ್ಟ್ ಆದೇಶ ಉಲ್ಲಂಘನೆ; ಮೂಡಾ ಆಯುಕ್ತರ ಬಂಧನಕ್ಕೆ ಕೇಂದ್ರ ಸಚಿವರ ಆಗ್ರಹ

ಸಾಕ್ಷ್ಯ ನಾಶ ಮಾಡಿ ಹಗರಣ ಮುಚ್ಚಿ ಹಾಕಲು ಸಿಎಂ, ಲೋಕಾಯುಕ್ತ ಅಧಿಕಾರಿಗಳು, ಮೂಡಾ ಅಧಿಕಾರಿಗಳ ಷಡ್ಯಂತ್ರ

 

ಬೆಂಗಳೂರು: ಸಾಕ್ಷ್ಯ ನಾಶ ಮಾಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು  ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಎಂದು ನೇರ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ, ನ್ಯಾಯಾಲಯಗಳ ಆದೇಶ ಉಲ್ಲಘಿಸಿ ಸಿಎಂ ಪತ್ನಿ ಅವರಿಂದ ನಿವೇಶನಗಳನ್ನು ವಾಪಸ್ ಪಡೆದಿರುವ ಮೂಡಾ ಆಯುಕ್ತರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜೆಡಿಎಸ್ ಪಕ್ಷದ ಕಚೇರಿ ಬಳಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಮೂಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕಾಯುಕ್ತ ಅಧಿಕಾರಿಗಳು ಹಾಗೂ ಮೂಡಾ ಅಧಿಕಾರಿಗಳು ವ್ಯವಸ್ಥಿತವಾಗಿ ಶಾಮೀಲಾಗಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದರು.

ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ 14 ನಿವೇಶನಗಳನ್ನು ವಾಪಸ್ ನೀಡಿರುವ ಕ್ರಮದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರು, ನಿವೇಶನಗಳನ್ನು ಹಿಂದಕ್ಕೆ ಪಡೆದಿರುವುದು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆ ಮತ್ತು ನ್ಯಾಯಾಂಗ ನಿಂದನೆ. ಹೀಗಾಗಿ ಮುಡಾ ಆಯುಕ್ತರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದರು.

ನಿವೇಶನಗಳನ್ನು ಹಿಂದಕ್ಕೆ ಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರುವ ಅವರು ತಮ್ಮ ಅಧಿಕಾರದ ಪ್ರಭಾವದಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಮೂಡಾ ತನಿಖೆಯನ್ನು ಜಾರಿ ನಿರ್ದೇಶನಾಲಯ (ED) ಕೈಗೆತ್ತಿಕೊಂಡು ಈಸಿಆರ್ ದಾಖಲು ಮಾಡಿದ ಕೂಡಲೇ ಬಿರುಸಿನ ಬೆಳವಣಿಗೆಗಳು ನಡೆದಿವೆ. ಮಂಗಳವಾರದ ದಿನ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರೇ ಖುದ್ದು ಮುಡಾ ಕಚೇರಿಗೆ ಬಂದು ನಿವೇಶನ ವಾಪಸ್ ನೀಡುವುದಾಗಿ ಹೇಳಿದ್ದರು. ಈ ಹೇಳಿಕೆ ಹೊರಬಿದ್ದ ನಂತರ ಎಲ್ಲಾ ನಿವೇಶನಗಳು ಮೂಡಾ ವಶಕ್ಕೆ ಹೋಗಿವೆ. ಹದಿನಾಲ್ಕು ನಿವೇಶನಗಳ ಕ್ರಯಪತ್ರಗಳು ರದ್ದಾಗಿವೆ ಎಂದು ಮುಡಾ ಆಯುಕ್ತರೇ ಹೇಳಿಕೆ ಕೊಟ್ಟಿದ್ದಾರೆ. ಇದೆಲ್ಲಾ ರಾಕೆಟ್ ವೇಗದಲ್ಲಿ ಆಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇದೆಲ್ಲವೂ ಸಂಶಯಾಸ್ಪದವಾಗಿ ನಡೆದಿದೆ. ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಯಾಲಗಳ ಆದೇಶಗಳಿವೆ. ಹೀಗಿದ್ದೂ ಮೂಡಾ ಆಯುಕ್ತರು ನಿವೇಶನಗಳನ್ನು ವಾಪಸ್ ಪಡೆಯುವ ನಿರ್ಧಾರ ಮಾಡುತ್ತಾರೆ. ಅವರಿಗೆ ಈ ಅಧಿಕಾರ ಇಲ್ಲ. ಇಲ್ಲಿ ಸಿಎಂ ಅಧಿಕಾರದ ದುರುಪಯೋಗ ಮಾಡಿದ್ದಾರೆ. ಯಾವ ಆಧಾರದ ಮೇಲೆ ವಾಪಸ್ ಪಡೆಯಲಾಗಿದೆ? ಮೂಡಾ ಆಯುಕ್ತರು ತಮ್ಮ ಅಧಿಕಾರ ಮೀರಿ ವರ್ತಿಸಿದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಕೇಂದ್ರ ಸಚಿವರು ಆಗ್ರಹಿಸಿದರು.

ಮುಖ್ಯಮಂತ್ರಿಗಳು ಲೋಕಾಯುಕ್ತ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ತನಿಖೆಯಲ್ಲಿ ಸಿಎಂ ಹಸ್ತಕ್ಷೇಪ ಎದ್ದು ಕಾಣುತ್ತಿದೆ. ಯಾರ ಆಸ್ತಿ ಇದು. ಎಲ್ಲವನ್ನೂ ನಕಲಿ ದಾಖಲೆ ಸೃಷ್ಟಿ ಮಾಡಿ ಜನರನ್ನು ಯಾಮಾರಿಸಿದರು. ಕೋರ್ಟ್ ನಲ್ಲಿ ನಮ್ಮದೇ ಆಸ್ತಿ ಎಂದಿದ್ದಾರೆ. ಇನ್ನೊಮ್ಮೆ ಜುಜುಬಿ ನಿವೇಶನಗಳು ಎಂದರು. ಅವುಗಳ ಮೌಲ್ಯ ₹62 ಕೋಟಿ ಎಂದರು. ಇಷ್ಟಕ್ಕೂ ಮೂಡಾ ಆಯುಕ್ತ ಎಲ್ಲಿಗೆ, ಯಾರ ಬಳಿಗೆ ಯಾವಾಗ ಬಂದು ನಿವೇಶನಗಳನ್ನು ವಾಪಸ್ ಪಡೆಯುವ ಮನವಿ ಸ್ವೀಕಾರ ಮಾಡಿದರು? ಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಅವರು ದೂರಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

2 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

6 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

6 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

6 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

6 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

7 hours ago